ಬೆಂಗಳೂರು: ಭಾರತೀಯ ವೈದ್ಯಕೀಯ ಪರಿಷತ್ ತಿದ್ದುಪಡಿ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ವೈದ್ಯರು ಶನಿವಾರ ದೇಶದಾದ್ಯಂತ ಹೊರರೋಗಿ ಸೇವೆ (ಒಪಿಡಿ) ಬಹಿಷ್ಕರಿಸಿ ಮುಷ್ಕರ ನಡೆಸುತ್ತಿವೆ.
ಖಾಸಗಿ ಆಸ್ಪತ್ರೆಗಳು ಮುಷ್ಕರ ನಡೆಸುತ್ತಿರುವ ಪರಿಣಾಮ ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಲಭ್ಯವಿರುವುದಿಲ್ಲ. ಹೀಗಾಗಿ ಹೊರರೋಗಿ ಸೇವೆ ಪಡೆಯಬೇಕಾದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ.
ಖಾಸಗಿ ಆಸ್ಪತ್ರೆಗಳು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುವ ಹಿನ್ನಲೆ ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ನೀಡಲು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಿಗೆ ಆದೇಶ ನೀಡಿದೆ.
ಖಾಸಗಿ ಆಸ್ಪತ್ರೆಗಳು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುವ ಹಿನ್ನಲೆ ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ನೀಡಲು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಿಗೆ ಆದೇಶ ನೀಡಿದೆ.
ಕೇಂದ್ರ ಸರ್ಕಾರವು ಭಾರತೀಯ ವೈದ್ಯಕೀಯ ಪರಿಷತ್ ಕಾಯ್ದೆಗೆ ಕೆಲ ತಿದ್ದುಪಡಿ ತರಲು 2016ರಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿತ್ತು. ಈ ವೇಳೆ ಅವೈಜ್ಞಾನಿಕವಾಗಿ ತಿದ್ದುಪಡಿ ಮಾಡಲಾಗುತ್ತಿದ್ದು, ತಿದ್ದುಪಡಿಯಿಂದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಮರೀಚಿಕೆಯಾಗಲಿದೆ.
ವೈದ್ಯಕೀಯ ಶಿಕ್ಷಣದಲ್ಲಿ ರಾಜ್ಯಗಳು ಅಧಿಕಾರ ಕಳೆದುಕೊಳ್ಳಲಿವೆ. ಹೀಗಾಗಿ ಮರುಪರಿಶೀಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಒತ್ತಾಯಿಸಿತ್ತು. ಆದರೂ, ಯಾವುದೇ ಪರಿಷ್ಕರಣೆ ಇಲ್ಲದೇ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ನಡೆಸಿದೆ. ಹೀಗಾಗಿ ಐಎಂಎ ದೇಶದಾದ್ಯಂತ ಇಂದು ಒಂದು ದಿನ ಹೊರ ರೋಗಿಗಳ ಸೇವೆ ಬಂದ್ ಮಾಡುವಂತೆ ಕರೆ ನೀಡಿದೆ.