ಸಾಂದರ್ಭಿಕ ಚಿತ್ರ 
ದೇಶ

2014-16 ರ ಅವಧಿಯಲ್ಲಿ ಎಸ್ ಸಿ, ಎಸ್ ಟಿ ಕಾಯ್ದೆಯಡಿಯಲ್ಲಿ ಕೇವಲ ಶೇ.27 ರಷ್ಟು ಮಂದಿಗೆ ಶಿಕ್ಷೆ

ಎಫ್ ಐ ಆರ್ ದಾಖಲಾತಿಯಲ್ಲಿ ವಿಳಂಬ, ಸಾಕ್ಷ್ಯಾಧಾರಗಳ ಕೊರತೆ ಮತ್ತಿತರ ಕಾರಣಗಳಿಂದಾಗಿ 2014-16ರ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಯ್ದೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಶೇ. 27 ರಷ್ಟು ಮಂದಿಗೆ ಮಾತ್ರ ಶಿಕ್ಷೆಯಾಗಿದೆ.

ನವದೆಹಲಿ: ಎಫ್ ಐ ಆರ್ ದಾಖಲಾತಿಯಲ್ಲಿ ವಿಳಂಬ,  ಸಾಕ್ಷ್ಯಾಧಾರಗಳ ಕೊರತೆ ಮತ್ತಿತರ ಕಾರಣಗಳಿಂದಾಗಿ 2014-16ರ ಅವಧಿಯಲ್ಲಿ  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಯ್ದೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಶೇ. 27 ರಷ್ಟು ಮಂದಿಗೆ ಮಾತ್ರ ಶಿಕ್ಷೆಯಾಗಿದೆ.

ಪರಿಶಿಷ್ಟ ಜಾತಿ, ಪಂಗಡದ ಮೇಲಿನ  ಅಪರಾಧಕ್ಕಾಗಿ  ದೇಶದಲ್ಲಿ 195 ವಿಶೇಷ ನ್ಯಾಯಾಲಯಗಳನ್ನು  ಸ್ಥಾಪಿಸಲಾಗಿದೆ. ಆದರೆ, ಶಿಕ್ಷೆಗೊಳಗಾಗುತ್ತಿರುವ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ  ಗೃಹ ಸಚಿವಾಲಯ ಮಾಹಿತಿ ನೀಡಿದೆ.

2016ರಲ್ಲಿ ಈ ಕಾಯ್ದೆಯಡಿ ಒಟ್ಟು 40, 718 ಪ್ರಕರಣಗಳು ದಾಖಲಾಗಿದ್ದು, 30, 966 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ಆದರೆ, ಶಿಕ್ಷೆಗೊಳಗಾದವರ ಸಂಖ್ಯೆ ಶೇ. 25.8 ರಷ್ಟಾಗಿದೆ ಎಂದು ಗೃಹ ಇಲಾಖೆ ಹೇಳಿಕೆ ನೀಡಿದೆ.

2015ರ ಅವಧಿಯಲ್ಲಿ 38, 510 ಪ್ರಕರಣಗಳು ದಾಖಲಾಗಿದ್ದು, 26, 922 ಚಾರ್ಜ್ ಶೀಟ್ ದಾಖಲಿಸಲಾಗಿದೆ.  ಆದರೆ, ಶೇ, 27. 2 ರಷ್ಟು ಮಂದಿಗೆ ಶಿಕ್ಷೆ ಆಗಿದೆ. 2014ರಲ್ಲಿ  40, 208  ಪ್ರಕರಣಗಳು ದಾಖಲಾಗಿದ್ದು,  29, 248  ಪ್ರಕರಣಗಳಲ್ಲಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ಶೇ.28.4 ರಷ್ಟಿಗೆ ಮಂದಿಗೆ ಮಾತ್ರ ಶಿಕ್ಷೆಯಾಗಿದೆ. 2017ರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

ಎಫ್ ಐಆರ್ ದಾಖಲಾತಿಯಲ್ಲಿ ವಿಳಂಬ, ಸಾಕ್ಷ್ಯಾಧಾರಗಳ ಕೊರತೆ, ಸಾಕ್ಷಿಗಳು ವಿರೋಧ ಹೇಳಿಕೆ ಮತ್ತಿತರ ಕಾರಣಗಳಿಂದಾಗಿ ಶಿಕ್ಷೆಗೊಳಪಟ್ಟವರ ಸಂಖ್ಯೆಯಲ್ಲಿ ತೀರಾ ಕಡಿಮೆಯಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಪ್ರಕರಣಗಳ ತ್ವರಿತ ವಿಚಾರಣೆಗಾಗಿ  ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳನ್ನೊಳಗೊಂಡ  ವಿಶೇಷ ನ್ಯಾಯಾಲಯವನ್ನು  ಒಂದು ಅಥವಾ ಅದಕ್ಕಿಂತ ಹೆಚ್ಚು ಜಿಲ್ಲೆಗಳಿಗೆ ಸ್ಥಾಪಿಸುವಂತೆ ಎಸ್  ಸಿ , ಎಸ್. ಟಿ ಕಾಯ್ದೆಯಲ್ಲಿನ ಸೆಕ್ಷನ್ 14ರಲ್ಲಿ  ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ