ಅಣ್ಣಾ ಹಜಾರೆ 
ದೇಶ

ಲೋಕಪಾಲ್ ನೇಮಕ ವಿಳಂಬ: ಅಕ್ಟೋಬರ್ 2 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

ಲೋಕಪಾಲ ನೇಮಕ ವಿಳಂಬ ಮಾಡಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಅಕ್ಟೋಬರ್ 2 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ.....

ರಾಲೇಗನ್ ಸಿದ್ಧಿ: ಲೋಕಪಾಲ ನೇಮಕ ವಿಳಂಬ ಮಾಡಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಅಕ್ಟೋಬರ್ 2 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
ಭ್ರಷ್ಟಾಚಾರ ಮುಕ್ತ ರಾಷ್ಟ್ರಕ್ಕಾಗಿ ತಮ್ಮ ಅಭಿಯಾನದಲ್ಲಿ ಸೇರಬೇಕೆಂದು ಅವರು ಜನರಲ್ಲಿ ಮನವಿ ಮಾಡಿದರು.
ಮಹಾರಾಷ್ಟ್ರ ಅಹಮದ್ ನಗರ ಜಿಲ್ಲೆಯ ರಾಲೇಗನ್ ಸಿದ್ಧಿಯಲ್ಲಿ ಮಹಾತ್ಮಾ ಗಾಂಧಿ ಜಯಂತಿಯಾದ ಅಕ್ಟೋಬರ್ 2ರಿಂದ ತಾನು ಉಪವಾಸ ಪ್ರಾರಂಭಿಸುವುದಾಗಿ  ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಹಜಾರೆ ಪಿಟಿಐ ಗೆ ತಿಳಿಸಿದ್ದಾರೆ.
ಈ ಮುನ್ನ ಎನ್ ಡಿಎ ಸರ್ಕಾರ ಲೋಕಪಾಲ್ ಮಸೂದೆ ಜಾರಿ ಮಾಡುವುದಾಗಿಯೂ, ಕೇಂದ್ರದಲ್ಲಿ ಲೋಕಪಾಲರ ನೇಮಕ ಮಾಡುವುದಾಗಿಯೂ ಭರವಸೆ ನಿಡಿತ್ತು. 2014ರಲ್ಲಿ ಅಂದಿನ ರಾಷ್ಟ್ರಪತಿಗಳು ಲೋಕಪಾಲ್ ವಿಧೇಯಕಕ್ಕೆ ಸಹಿ ಹಾಕಿದ್ದರು. ಆದರೆ ಇದಿನ್ನೂ ಜಾರಿಯಾಗಿಲ್ಲ ಎಂದು ಅಣ್ಣಾ ಹಜಾರೆ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.
"ಭ್ರಷ್ಟಾಚಾರವನ್ನು ತೊಡೆದು ಹಾಕಲು ಸರ್ಕಾರಕ್ಕೆ ಇಚ್ಚೆ ಇದ್ದಂತಿಲ್ಲ. ಆದ್ದರಿಂದ ಇದು ಲೋಕಪಾಲ್ ನೇಮಕ ವಿಳಂಬಕ್ಕೆ ಕಾರನಗಳನ್ನು ಹೇಳುತ್ತಾ ಬಂದಿದೆ."  ಹಜಾರೆ ಹೇಳಿದರು.
ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿರುವ ಅಣ್ಣಾ ಹಜಾರೆ 2011 ರಲ್ಲಿ 12 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಅಂದು ದೇಶಾದ್ಯಂತ ಹಜಾರೆ ಅವರ ಹೋರಾಟಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್