ಕೋಲ್ಕತಾ: ಬಿಜೆಪಿ ಮಣಿಸಲು ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯ ಕಸರತ್ತು ಮುಂದುವರೆದಿದ್ದು, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶೀಘ್ರದಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಕೋಲ್ಕತಾದಲ್ಲಿ ಜನವರಿ 19ರಂದು ನಡೆಯುವ ತಮ್ಮ ಉದ್ದೇಶಿಸಿ ಒಕ್ಕೂಟ ರಂಗ ರ್ಯಾಲಿಗೆ ಆಹ್ವಾನ ನೀಡಲಿದ್ದಾರೆ ಎನ್ನಲಾಗಿದೆ.
ಟಿಎಂಸಿ ಮೂಲಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರು ಮೂರು ದಿನಗಳ ದೆಹಲಿ ಭೇಟಿ ವೇಳೆ ಆರ್ ಜೆಡಿ ನಾಯಕ ತೇಜಶ್ವಿ ಯಾದವ್ ಹಾಗೂ ಇತರೆ ಪ್ರತಿಪಕ್ಷಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಈ ಮುಂಚೆ ಬಿಜೆಪಿ ವಿರುದ್ಧದ ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಸೇರಿಸಿಕೊಳ್ಳಬೇಕೆ ಬೇಡವೇ ಎಂಬ ಗೊಂದಲವಿತ್ತು. ಆದರೆ ಈಗ ದೇಶದ ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷದೊಂದಿಗೆ ಕೈಜೋಡಿಸಲು ದೀದಿ ಮುಂದಾಗಿದ್ದಾರೆ.
ಸೋನಿಯಾ ಗಾಂಧಿ ಭೇಟಿಗೆ ಸಮಯ ನಿಗದಿಯಾಗಿಲ್ಲ. ಆದರೆ ಆಗಸ್ಟ್ 1ರಂದು ದೆಹಲಿಗೆ ತೆರಳುತ್ತಿರುವ ಪಶ್ಚಿಮ ಬಂಗಾಳ ಸಿಎಂ, ಇದೇ ವೇಳೆ ಸೋನಿಯಾ ಸೇರಿದಂತೆ ಇತರೆ ಪ್ರತಿಪಕ್ಷಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics