ದೇಶ

ಜಮ್ಮು-ಕಾಶ್ಮೀರ: ಉಗ್ರ ಸಂಘಟನೆಗೆ ಎಂಬಿಎ ವಿದ್ಯಾರ್ಥಿ ಸೇರ್ಪಡೆ

Manjula VN
ಶ್ರೀನಗರ: ಕಾಶ್ಮೀರ ಯುವಕರು ಉಗ್ರ ಸಂಘಟನೆಗಳಿಗೆ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಪುಲ್ವಾಮ ಜಿಲ್ಲೆಯ ಎಂಬಿಎ ವಿದ್ಯಾರ್ಥಿಯೊಬ್ಬ ಇದೀಗ ಉಗ್ರ ಸಂಘಟನೆಯೊಂದಕ್ಕೆ ಸೇರ್ಪಡೆಗೊಂಡಿದ್ದಾನೆಂದು ಹೇಳಲಾಗುತ್ತಿದೆ. 
ಇಶ್ಫಕ್ ವಾನಿ (26) ದಕ್ಷಿಣ ಕಾಶ್ಮೀರದ ಕೊಯಿಲ್ ಗ್ರಾಮದ ಮೂಲದವರಾಗಿದ್ದು, ಪಾಕಿಸ್ತಾನ ಮೂಲಗ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಅಬು ತುರಾಬ್ ಎಂದ ಕೋಡ್ ಹೆಸರಿನೊಂದಿಗೆ ಸೇರ್ಪಡೆಗೊಂಡಿದ್ದಾನೆಂದು ಹೇಳಲಾಗುತ್ತಿದೆ. 
ಇಶ್ಫಕ್ ವಾನಿ ಎಕೆ.47 ಹಿಡಿದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಶ್ಫಕ್ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದಾನೆಂದು ಹೇಳಲಾಗುತ್ತಿದೆ. 
ಇಶ್ಫಕ್ ಕುಟುಂಬ ಸದಸ್ಯರು ಜು.22 ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋ ಕುರಿತು ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದು, ಇಶ್ಫಕ್ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿರುವುದು ಖಚಿತವಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಯುವಕರು ಉಗ್ರ ಸಂಘಟನೆಗೆ ಸೇರ್ಪಡೆಗೊಂಡ ಬಳಿಕ ಶಸ್ತ್ರಾಸ್ತ್ರ ಹಿಡಿದು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಇತ್ತೀಚೆಗೆ ಸಾಮಾನ್ಯವಾಗಿ ಹೋಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹರಿಬಿಡುವ ಮೂಲಕ ತಾವು ಉಗ್ರ ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿರುವ ವಿಚಾರವನ್ನು ತಿಳಿಸುತ್ತಿದ್ದಾರೆ. 
ಉಗ್ರ ಸಂಘಟನೆಗಳಿಗೆ ಅನೇಕ ವಿದ್ಯಾವಂತ ಯುವಕರು, ಇಂಜಿನಿಯರ್ ಗಳು, ಎಂಬಿಎ ಪದವೀಧರರು ಹಾಗೂ ಸ್ನಾತಕೋತ್ತರ ಪದವೀದರರು ಸೇರ್ಪಡೆಗೊಳ್ಳುತ್ತಿದ್ದಾರೆಂದಿದ್ದಾರೆ. 
SCROLL FOR NEXT