ಲೋಕಸಭೆ 
ದೇಶ

ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು: ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

ಜಮ್ಮು ಮತ್ತು ಕಾಶ್ಮೀರ ಬಾಲಕಿ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಹಾಗೂ ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಪ್ರಕರಣಗಳ....

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಬಾಲಕಿ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಹಾಗೂ ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ಹಾಗೂ ಪ್ರಕರಣದ ತ್ವರಿತ ವಿಚಾರಣೆ ನಡೆಸುವ ಅಂಶವಿರುವ ಕ್ರಿಮಿನಲ್ ಕಾಯ್ದೆಯ ತಿದ್ದುಪಡಿ ಮಸೂದೆ ಇಂದು ಲೋಕಸಭೆಯಲ್ಲಿ ಪಾಸ್ ಆಗಿದೆ.
ಅಪರಾಧ ಕಾನೂನು(ತಿದ್ದುಪಡಿ) ಮಸೂದೆ 2018 ಅನ್ನು ಬಹುತೇಕ ರಾಜಕೀಯ ಪಕ್ಷಗಳ ಸದಸ್ಯರು ಬೆಂಬಲಿಸಿದ್ದು, ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಅಪ್ರಾಪ್ತ ಬಾಲಕಿಯರಿಗೆ ರಕ್ಷಣೆ ಒದಗಿಸುವ ಉದ್ದೇಶದಿಂದ ಈ ತಿದ್ದುಪಡಿ ಮಸೂದೆ ಮಂಡಿಸಲಾಗಿದೆ ಎಂದು ಸುಮಾರು ಎರಡು ಗಂಟೆಗಳ ಚರ್ಚೆಯ ಬಳಿಕ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ತಿಳಿಸಿದ್ದಾರೆ.
ಸದ್ಯ ಇರುವ ಕಾನೂನಿನಲ್ಲಿ 16 ವರ್ಷ ಅಥವಾ 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರ ನಡೆದರೆ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಇಲ್ಲ ಎಂದು ರಿಜಿಜು ಹೇಳಿದ್ದಾರೆ.
ಈ ತಿದ್ದುಪಡಿ ಮಸೂದೆಯಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ತ್ವರಿತ ವಿಚಾರಣೆ ನಡೆಯಬೇಕೆಂಬ ಅಂಶವನ್ನು ಸೇರಿಸಲಾಗಿದೆ. ಅಲ್ಲದೆ
16 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು. ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾಧಿ ಶಿಕ್ಷೆ ವಿಧಿಸಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಮಹತ್ವದ ಆದೇಶ

ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಏ.20ಕ್ಕೆ ಅಮೆರಿಕಾಕ್ಕೆ..!

ನಾನೇನು ಕೇರಳದಲ್ಲಿ ಮೋಜು- ಮಸ್ತಿಗೆ ಹೋಗಿರಲಿಲ್ಲ: ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ; ಆಪ್ತರ ತಲೆದಂಡ- ಜಮೀರ್ ಕೆಂಡ!

SCROLL FOR NEXT