ಸಾಂದರ್ಭಿಕ ಚಿತ್ರ 
ದೇಶ

ಪ್ರಧಾನ ಮಂತ್ರಿ ಆವಾಸ್ ಯೋಜನೆ: 9 ರಾಜ್ಯಗಳಲ್ಲಿ ಶೇ.4ರಷ್ಟು ಮನೆಗಳು ಮಾತ್ರ ನಿರ್ಮಾಣ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 9 ರಾಜ್ಯಗಳಲ್ಲಿ ಅನುಮೋದನೆಗೊಂಡ 20 ಲಕ್ಷಕ್ಕೂ ಅಧಿಕ ...

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 9 ರಾಜ್ಯಗಳಲ್ಲಿ ಅನುಮೋದನೆಗೊಂಡ 20 ಲಕ್ಷಕ್ಕೂ ಅಧಿಕ ಮನೆಗಳಲ್ಲಿ ಕೇವಲ ಶೇಕಡಾ 4.05ರಷ್ಟು ಮನೆಗಳು ಮಾತ್ರ ಇದುವರೆಗೆ ಪೂರ್ಣಗೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಹೇಳಿದೆ.

ಛತ್ತೀಸ್ ಗಢ, ಹರ್ಯಾಣ, ಜಾರ್ಖಂಡ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ತಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ 20,23,884 ಮನೆಗಳಲ್ಲಿ 82,143 ಮನೆಗಳು ಮಾತ್ರ ನಿರ್ಮಾಣಗೊಂಡಿವೆ. ಹರ್ಯಾಣ, ಉತ್ತರ ಪ್ರದೇಶ ಮತ್ತು ಚತ್ತೀಸ್ ಗಢ ಗಳಲ್ಲಿ ಮನೆ ನಿರ್ಮಾಣ ಕಾಮಗಾರಿ ಸರಿಯಾಗಿ ಕಾರ್ಯನಿರ್ವಹಿಸಲೇ ಇಲ್ಲ. 10 ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದ್ದರೂ ಕೂಡ ಹರ್ಯಾಣದಲ್ಲಿ ಒಂದು ಮನೆ ಕೂಡ ನಿರ್ಮಾಣವಾಗಿಲ್ಲ. ಉತ್ತರ ಪ್ರದೇಶದಲ್ಲಿ ಕೂಡ ಶೂನ್ಯ ಸಾಧನೆ. ಛತ್ತೀಸ್ ಗಢದಲ್ಲಿ 2,53,549 ಮನೆಗಳಲ್ಲಿ 146 ಮನೆಗಳು ಮಾತ್ರ ಪೂರ್ಣಗೊಂಡಿವೆ.

ಇತರ ರಾಜ್ಯಗಳು ಸಹ ಉತ್ತಮ ಸಾಧನೆ ಮಾಡಿಲ್ಲ. ಮಧ್ಯಪ್ರದೇಶ ಮತ್ತು ಒಡಿಶಾಗಳಲ್ಲಿ ಶೇಕಡಾ 9.7 ಮತ್ತು ಶೇಕಡಾ 9.08ರಷ್ಟು ಮನೆಗಳು ಪೂರ್ಣವಾಗಿವೆ.

ಅನೇಕ ಕಾರಣಗಳಿಂದ ಆವಾಸ್ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆ. ರಾಜ್ಯ ಸರ್ಕಾರಗಳ ಸೂಕ್ತ ಸಹಕಾರ ಕೊರತೆ ಇದಕ್ಕೆ ಮುಖ್ಯ ಕಾರಣವೆನ್ನಲಾಗಿದೆ ಎಂದು ಸಚಿವಾಲಯ ಹೇಳಿದೆ. ಸಚಿವಾಲಯ ಸ್ಥಿತಿಗತಿಯನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ. ಮೂಲ ಸೌಕರ್ಯಗಳ ಕೊರತೆ ಮತ್ತು ಮನೆ ನಿರ್ಮಾಣಕ್ಕೆ ವಸ್ತುಗಳು ಸರಿಯಾಗಿ ಸಿಗದೆ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಸ್ಥಳೀಯ ಕಾರಣಗಳು ಸಹ ಆವಾಸ್ ಯೋಜನೆಯಡಿ ಮನೆ ನಿರ್ಮಾಣ ವಿಳಂಬವಾಗಲು ಕಾರಣವಾಗಿದೆ ಎನ್ನುತ್ತಾರೆ ಹೈದರಾಬಾದಿನ ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಸಂಸ್ಥೆಯ ಪ್ರೊ. ಹೆಚ್ ಕೆ ಸೋಲಂಕಿ. ಛತ್ತೀಸ್ ಗಢ, ರಾಜಸ್ತಾನ ಮತ್ತು ಮಧ್ಯ ಪ್ರದೇಶಗಳಲ್ಲಿ ಸದ್ಯದಲ್ಲಿ ಚುನಾವಣೆ ನಡೆಯಲಿದೆ. ವಿವಿಧ ಪಕ್ಷಗಳು ಇದನ್ನು ತಂತ್ರವಾಗಿ ಪರಿಗಣಿಸುತ್ತಿವೆ ಎನ್ನುತ್ತಾರೆ ಅವರು.

ಕೇಂದ್ರ ಸರ್ಕಾರ ಸಮಾಜ ಕಲ್ಯಾಣ ಯೋಜನೆಯಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಈ ಹಿಂದೆ ಇಂದಿರಾ ಆವಾಸ್ ಯೋಜನೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT