ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮಹರಾಷ್ಟ್ರ ಸರ್ಕಾರ ಭಾನುವಾರ ಘೋಷಿಸಿದೆ.
ಈ ಮಧ್ಯೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಸಹ ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ.
ಚಾಲಕನ ನಿರ್ಲಕ್ಷದಿಂದಾಗಿ ಬಸ್ ಅಪಘಾತ ಸಂಭವಿಸಿದೆ ಎಂದು ರಾಯಗಡ ಜಿಲ್ಲಾ ಉಸ್ತುವಾರಿ ಸಚಿವ ರವೀಂದ್ರ ಚವಾಣ್ ಅವರು ತಿಳಿಸಿದ್ದಾರೆ.
ನಿನ್ನೆ ಬೆಳಗ್ಗೆ 31 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ರಾಯಗಡ ಜಿಲ್ಲೆಯ ಮಹಾಬಲೇಶ್ವರ ರಸ್ತೆಯ ಅಂಬೆನಾಲಿ ಘಾಟಿಯಲ್ಲಿ 500 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿತ್ತು.