ಮೋದಿ ನೇತೃತ್ವದಲ್ಲಿ ಭಾರತ ಆಕ್ರಮಣಕಾರಿ ನೀತಿ ಅಳವಡಿಸಿಕೊಂಡಿದೆ: ಪಾಕ್ ಅಳಲು 
ದೇಶ

ಮೋದಿ ನೇತೃತ್ವದಲ್ಲಿ ಭಾರತ ಆಕ್ರಮಣಕಾರಿ ನೀತಿ ಅಳವಡಿಸಿಕೊಂಡಿದೆ: ಪಾಕ್ ಅಳಲು

ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಭಾರತ ಆಕ್ರಮಣಕಾರಿ ಮನಸ್ಥಿತಿ ಹಾಗೂ ವರ್ತನೆಗಳನ್ನು ಅಳವಡಿಸಿಕೊಂಡಿದೆ ಎಂದು ಪಾಕಿಸ್ತಾನ ಆರೋಪಿಸಿದೆ.

ಇಸ್ಲಾಮಾಬಾದ್: ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಭಾರತ ಆಕ್ರಮಣಕಾರಿ ಮನಸ್ಥಿತಿ ಹಾಗೂ ವರ್ತನೆಗಳನ್ನು ಅಳವಡಿಸಿಕೊಂಡಿದೆ ಎಂದು ಪಾಕಿಸ್ತಾನ ಆರೋಪಿಸಿದೆ. 
ಪಾಕಿಸ್ತಾನದ ವಿರುದ್ಧ ಭಾರತ ಆಕ್ರಮಣಕಾರಿ ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಪಾಕಿಸ್ತಾನದ ನಿರ್ಗಮಿತ ರಕ್ಷಣಾ ಸಚಿವ  ಖುರಾಮ್ ದಸ್ತಗಿರ್ ಖಾನ್ ಹೇಳಿದ್ದಾರೆ.  ಭಾರತದ ವಿರುದ್ಧ ಕದನ ವಿರಾಮ ಉಲ್ಲಂಘನೆಯನ್ನು ಹೆಚ್ಚಿಸುತ್ತಿರುವ ಆರೋಪವನ್ನೂ ಮಾಡಿರುವ ಖಾನ್, ಭಾರತ ಎಷ್ಟೇ ಆಕ್ರಮಣಕಾರಿಯಾದರೂ ಕಾಶ್ಮೀರದ ಜನತೆಗೆ ಪಾಕಿಸ್ತಾನ ಬೆಂಬಲ ನೀಡುವುದನ್ನು ಮುಂದುವರೆಸುತ್ತದೆ ಎಂದು ಹೇಳಿದೆ. 
2003 ರ ಕದಾನ ವಿರಾಮ ಉಲ್ಲಂಘನೆಯ ಒಪ್ಪಂದವನ್ನು ಪೂರ್ಣವಾಗಿ ಜಾರಿಗೆ ತರುವುದಕ್ಕೆ ಸಂಬಂಧಿಸಿದಂತೆ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಉಭಯ ರಾಷ್ಟ್ರಗಳ ಡಿಜಿಗಳೂ ತೀರ್ಮಾನಿಸಿದ ಬೆನ್ನಲ್ಲೇ ಪಾಕಿಸ್ತಾನ ಭಾರತದ ವಿರುದ್ಧ ಆರೋಪ ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT