ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಪ್ರತಿಭಟನಕಾರರ ಮೇಲೆ ಹರಿದ ಸಿಆರ್‌ಪಿಎಫ್‌ ವಾಹನ, ಯುವಕ ಸಾವು!

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಿಆರ್‌ಪಿಎಫ್‌ ವಾಹನದ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದು ಈ ವೇಳೆ ವೇಗವಾಗಿ ಬಂದ ವಾಹನದ ಕೆಳಗೆ ಸಿಲುಕ್ಕಿದ್ದ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಿಆರ್‌ಪಿಎಫ್‌ ವಾಹನದ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದು ಈ ವೇಳೆ ವೇಗವಾಗಿ ಬಂದ ವಾಹನದ ಕೆಳಗೆ ಸಿಲುಕ್ಕಿದ ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 
ಶುಕ್ರವಾರ ನೌಹಾಟ ಬಳಿ ಪ್ರತಿಭಟನಕಾರರು ಪ್ರತಿಭಟನೆಯಲ್ಲಿ ನಿರತರಾಗಿದ್ದು ಈ ವೇಳೆ ಅಲ್ಲಿಗೆ ಬಂದ ಸಿಆರ್‌ಪಿಎಫ್‌ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಉದ್ರಿಕ್ತರ ಕಡೆ ವೇಗವಾಗಿ ಸಿಆರ್‌ಪಿಎಫ್‌ ವಾಹನ ಬಂದಿದ್ದು ವಾಹನದ ಕೆಳಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 
ಮೃತ ಯುವಕನನ್ನು 21 ವರ್ಷದ ಕೈಸೇರ್ ಅಹಮ್ಮದ್ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಕೈಸೆರ್ ನನ್ನು ನಿನ್ನೆ ಶೇರ್ ಇ ಕಾಶ್ಮೀರ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಕಣಿವೆ ರಾಜ್ಯದಲ್ಲಿ ಇದೀಗ ಪ್ರತಿಭಟನೆಯ ಕಾವು ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಧಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT