ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾತ್ರೋರಾತ್ರಿ ಇಂಟರ್‌ನೆಟ್‍ ಸ್ಟಾರ್ ಆದ 'ಡ್ಯಾನ್ಸಿಂಗ್ ಅಂಕಲ್' ಯಾರು ಗೊತ್ತಾ?

ಮಧ್ಯಪ್ರದೇಶದ ಪ್ರೋಫೆಸರ್‌ ಒಬ್ಬರು ಮಾಡಿರುವ ಡ್ಯಾನ್ಸ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಧೂಳೆಬಿಸಿದೆ...

ಸಂಜೀವ್ ಶ್ರೀವಾತ್ಸವ
Vishwanath S
Updated On : 2 Jun 2018, 11:17 am
ಮಧ್ಯಪ್ರದೇಶದ ಪ್ರೋಫೆಸರ್‌ ಒಬ್ಬರು ಮಾಡಿರುವ ಡ್ಯಾನ್ಸ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಧೂಳೆಬಿಸಿದೆ. 
ಡ್ಯಾನ್ಸಿಂಗ್ ಅಂಕಲ್ ಎಂಬ ಅಡಿಬರಹದೊಂದಿಗೆ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ ಮಾಡಿದ್ದು ಇದೀಗ ಈ ವಿಡಿಯೋ ರಾತ್ರೋರಾತ್ರಿ ವೈರಲ್ ಆಗಿದೆ. ಅಲ್ಲದೆ ಟ್ವೀಟರ್ ನಲ್ಲಿ ಅಂಕಲ್ ಡ್ಯಾನ್ಸ್ ಗೆ ಯಾರು ಸರಿಸಾಟಿಯಿಲ್ಲ ಎಂಬ ರೀತಿಯಲ್ಲಿ ಸಂದೇಶಗಳನ್ನು ಬರೆಯುತ್ತಿದ್ದಾರೆ. 
ಡ್ಯಾನ್ಸಿಂಗ್ ಅಂಕಲ್ ಎಂದೇ ಖ್ಯಾತರಾಗಿರುವ 40ರ ಹರೆಯದ ಸಂಜೀವ್ ಶ್ರೀವಾತ್ಸವ್ ಅವರು ಭೋಪಾಲ್ ನ ಬಾಬಾ  ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಡಿಪಾರ್ಟ್ಮೆಂಟ್ನಲ್ಲಿ ಪ್ರೋಫೆಸರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

Advertisement

Advertisement

ಸಂಬಂಧಿಕರೊಬ್ಬರ ಮದುವೆಯಲ್ಲಿ ಸಂಜೀವ್ ಶ್ರೀವಾತ್ಸವ್ ಅವರು ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಇದೀಗ ವೈರಲ್ ಆಗಿದೆ. 1987ರಲ್ಲಿ ಬಾಲಿವುಡ್ ನಟ ಗೋವಿಂದಾ ಅಭಿನಯದ ಖುದ್ಗರ್ಜ್ ಚಿತ್ರದ ಆಪ್ ಕೆ ಆ ಜಾನೆ ಸೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. 
ಮೇ 30ರಂದು ಟ್ವೀಟ್ ಮಾಡಲಾದ ವಿಡಿಯೋವನ್ನು ಸಾವಿರಾರೂ ಮಂದಿ ರೀ ಟ್ವೀಟ್ ಮಾಡಿದ್ದು 10 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments