ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಉಗ್ರನ ಹೊಡೆದುರುಳಿಸಿದ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳೆ ಹೆಚ್ಚಿದ್ದು, ಗಡಿ ನುಸುಳಲು ಯತ್ನಿಸಿದ ಉಗ್ರರಿಗೆ ತಕ್ಕ ಶಾಸ್ತಿ ಮಾಡಿರುವ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳೆ ಹೆಚ್ಚಿದ್ದು, ಗಡಿ ನುಸುಳಲು ಯತ್ನಿಸಿದ ಉಗ್ರರಿಗೆ ತಕ್ಕ ಶಾಸ್ತಿ ಮಾಡಿರುವ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಇಂದು ಬೆಳಗ್ಗೆಯಷ್ಟೇ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಅಖ್ನೂರ್ ಸೆಕ್ಟರ್'ನ ಪ್ರಗ್ವಾಲ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಇಬ್ಬರು ಯೋಧರ ಹುತಾತ್ಮರಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಗಡಿಯಲ್ಲಿ ಹೈಅಲರ್ಟ್ ಘೋಷಣೆಯಾಗಿದ್ದು, ಇದೇ ವೇಳೆ ಗಡಿಯೊಳಗೆ ನುಸುಳಲು ಯತ್ನಿಸಿದ ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಉಗ್ರರು ಮತ್ತು ಸೇನೆ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ ಎನ್ನಲಾಗಿದೆ. ಇನ್ನು ಸೈನಿಕರ ಸಾವುನೋವಿನ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.