ಮುಜಾಫರ್ ನಗರ : ಪ್ರಚಾರದ ಗೀಳಿನಿಂದಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ವಿರುದ್ಧ ದೂರು ದಾಖಲಿಸಲಾಗಿದೆ.
ಸಾಮಾಜಿಕ ಹೋರಾಟಗಾರ ತಮಣ್ಣ ಹಸ್ಮಿ ಎಂಬವರು ಬಿಹಾರದ ಮುಜಾಫರ್ ನಗರದ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಪ್ರಚಾರ ಪಡೆಯುವ ಸಲುವಾಗಿ ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ರಾಧಾಮೋಹನ್ ಸಿಂಗ್ ಶನಿವಾರ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿದ್ದವು.