ಮಧ್ಯಪ್ರದೇಶದಲ್ಲಿ ಬಿಜೆಪಿ 60 ಲಕ್ಷ ನಕಲಿ ಮತದಾರರ ಹೆಸರು ಸೇರಿಸಿದೆ: ಆಯೋಗಕ್ಕೆ ಕಾಂಗ್ರೆಸ್ ದೂರು 
ದೇಶ

ಮಧ್ಯಪ್ರದೇಶದಲ್ಲಿ ಬಿಜೆಪಿ 60 ಲಕ್ಷ ನಕಲಿ ಮತದಾರರ ಹೆಸರು ಸೇರಿಸಿದೆ: ಆಯೋಗಕ್ಕೆ ಕಾಂಗ್ರೆಸ್ ದೂರು

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ತಯಾರಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ, ಈ ನಡುವೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ತಯಾರಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ, ಈ ನಡುವೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 
230 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಟ್ಟಾರೆ ಒಟ್ಟು 60 ಲಕ್ಷ ನಕಲಿ ಮತದಾರರ ಹೆಸರನ್ನು ಸೇರಿಸಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು, ಕೂಡಲೇ ಈ ಹೆಸರುಗಳನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.  ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ನೇತೃತ್ವದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರ ಒಟ್ಟು 60 ಲಕ್ಷ ನಕಲಿ ಮತದಾರರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿದೆ ಎಂದು ಆರೋಪಿಸಿದ್ದಾರೆ. " ಆರೋಪಕ್ಕೆ ಸಂಬಂಧಿಸಿದ ದಾಖಲೆ, ಪುರಾವೆಗಳನ್ನು ನೀಡಿದ್ದೇವೆ 100 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮದೇ ಆದ ತನಿಖೆಯನ್ನು ನಡೆಸಿದ್ದೇವೆ ಎಂದು ಕಮಲ್ ನಾಥ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ