ಭದ್ರತಾ ಸಿಬ್ಬಂದಿ 
ದೇಶ

ಶಿಲ್ಲಾಂಗ್ ನಲ್ಲಿ ಕಲ್ಲು ತೂರಾಟ: ಉದ್ವಿಗ್ನ ಪರಿಸ್ಥಿತಿ ನಿರ್ಮಾಣ, ಕರ್ಫ್ಯೂ ಜಾರಿ

ಶಿಲ್ಲಾಂಗ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ದುಷ್ಕರ್ಮಿಗಳ ಗುಂಪು ಕಳೆದ ನಾಲ್ಕು ದಿನಗಳಿಂದ....

ಶಿಲ್ಲಾಂಗ್‌: ಶಿಲ್ಲಾಂಗ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ದುಷ್ಕರ್ಮಿಗಳ ಗುಂಪು  ಕಳೆದ ನಾಲ್ಕು ದಿನಗಳಿಂದ ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಘಾಲಯದ ರಾಜಧಾನಿ ಶಿಲ್ಲಾಂಗ್ ನಲ್ಲಿ ಸೋಮವಾರವೂ ಕರ್ಫ್ಯೂ ಮುಂದುವರೆಸಲಾಗಿದೆ.
ಶಿಲ್ಲಾಂಗ್ ನಲ್ಲಿಇಂದು ಸಂಜೆ ನಾಲ್ಕು ಗಂಟೆಯಿಂದ ನಾಳೆ ಸಂಜೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಪೂರ್ವ ಖಾಶಿ ಹಿಲ್ಸ್ ಸಹಾಯಕ ಪೊಲೀಸ್ ಆಯುಕ್ತ ಪೀಟರ್ ಎಸ್ ಧಾಕರ್ ಅವರು ಹೇಳಿದ್ದಾರೆ.
ಕೆಲ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು, ಮೊಬೈಲ್ ಇಂಟರ್ ನೆಟ್ ಹಾಗೂ ಅಕ್ರಮವಾಗಿ ಡೀಸೆಲ್ ಮತ್ತು ಪೆಟ್ರೋಲ್ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಗುರುವಾರ ಮಧ್ಯಾಹ್ನ ಥೆಮ್‌ ಮೆಟೋರ್‌ ಪ್ರದೇಶದ ನಿವಾಸಿಗಳು ಬಸ್‌ ಕ್ಲೀನರ್ ಮೇಲೆ ಹಲ್ಲೆ ನಡೆಸಿರುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ ನಂತರ ಗಲಭೆ ಆರಂಭವಾಗಿತ್ತು. ಗಲಭೆಯಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದು, ಐದು ವಾಹನಗಳಿಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ವಲಸಿಗರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಈಗ ಹಿಂಸಾಚಾರಕ್ಕೆ ತಿರುಗಿದ್ದು ಹಲವು ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT