ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ 8,000 ಕೋಟಿ ರೂ ಪ್ಯಾಕೇಜ್?
ಕಬ್ಬು ಬೆಳೆಗಾರರಿಗೆ ರಿಲೀಫ್ ನೀಡುವ ನಿಟ್ಟಿನಲ್ಲಿ ಹಾಗೂ ಬಾಕಿ ನೀಡಬೇಕಿರುವ ಮೊತ್ತವನ್ನು ಪಾವತಿಸಲು ಕೇಂದ್ರ ಸರ್ಕಾರ 8,000 ಕೋಟಿ ರೂ ಪ್ಯಾಕೇಜ್ ಘೋಷಿಸಲು ಚಿಂತನೆ ನಡೆಸಿದೆ.
ನವದೆಹಲಿ: ಕಬ್ಬು ಬೆಳೆಗಾರರಿಗೆ ರಿಲೀಫ್ ನೀಡುವ ನಿಟ್ಟಿನಲ್ಲಿ ಹಾಗೂ ಬಾಕಿ ನೀಡಬೇಕಿರುವ ಮೊತ್ತವನ್ನು ಪಾವತಿಸಲು ಕೇಂದ್ರ ಸರ್ಕಾರ 8,000 ಕೋಟಿ ರೂ ಪ್ಯಾಕೇಜ್ ಘೋಷಿಸಲು ಚಿಂತನೆ ನಡೆಸಿದೆ.
ಸುಮಾರು 20,000 ಕೋಟಿಯಷ್ಟು ಬಾಕಿ ಹಣವನ್ನು ಸರ್ಕಾರ ಕಬ್ಬು ಬೆಳೆಗಾರರಿಗೆ ನೀಡಬೇಕಿದ್ದು, ಇದೇ 80,000 ಕೋಟಿ ರೂಪಾಯಿಯಲ್ಲಿ ಆ ಮೊತ್ತವೂ ಸೇರ್ಪಡೆಯಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2019 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈತರಿಗೆ ಅಸಮಾಧಾನವಾಗದಂತೆ ಎಚ್ಚರಿಕೆ ವಹಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಳ್ಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
30 ಎಲ್ ಎಂ ಟಿ ಬಫರ್ ಸ್ಟಾಕ್ ಸೇರಿದಂತೆ ಕಬ್ಬು ಬೆಳೆಗಾರರಿಗೆ ಉಪಯೋಗವಾಗುವಂತಹ ಹಲವು ಅಂಶಗಳನ್ನು ಪ್ಯಾಕೇಜ್ ನಲ್ಲಿ ಘೋಷಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.