ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನೀಟ್ ನಲ್ಲಿ ಉತ್ತಮ ರ್ಯಾಂಕ್ ಬರದಿದ್ದಕ್ಕೆ ಹೈದರಾಬಾದ್ ಯುವತಿ ಆತ್ಮಹತ್ಯೆ

ನೀಟ್ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಬರಲಿಲ್ಲ ಎಂಬ ಕಾರಣಕ್ಕೆ 18 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ....

ಜಸ್ಲೀನ್ ಕೌರ್
Lingaraj Badiger
Updated On : 5 Jun 2018, 7:49 am
ಹೈದರಾಬಾದ್: ನೀಟ್ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಬರಲಿಲ್ಲ ಎಂಬ ಕಾರಣಕ್ಕೆ 18 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಹೈದರಾಬಾದ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ಜಸ್ಲೀನ್ ಕೌರ್ ಎಂದು ಗುರುತಿಸಲಾಗಿದ್ದು, ನಗರದ ಹೃದಯ ಭಾಗವಾದ ಅಬಿದ್ಸ್ ಪ್ರದೇಶದಲ್ಲಿರುವ 10 ಅಂತಸ್ತಿನ ಕಾಂಪ್ಲೆಕ್ಸ್ ನಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ.
ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿ ನಡೆಸಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್‌)ಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜಸ್ಲೀನ್ ಕಡಿಮೆ ರ್ಯಾಂಕ್ ಪಡೆದಿದ್ದಳು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಕಾಚಿಗೋಡ ನಿವಾಸಿ ಜಸ್ಲೀನ್ ಕೌರ್ ಇಂದು ಬೆಳಗ್ಗೆ 10.30ರ ಸುಮಾರಿಗೆ ಮಯೂರಿ ಕಾಂಪ್ಲೆಕ್ಸ್ ಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement

Advertisement

ಕಟ್ಟಡದಿಂದ ಜಿಗಿದ ಜಸ್ಲೀನ್ ಕೌರ್ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement