ಕಿಶನ್ ಗಂಗಾ ಅಣೆಕಟ್ಟು ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಬೇಡಿಕೆಯನ್ನು ಒಪ್ಪಿಕೊಳ್ಳುವಂತೆ ವಿಶ್ವಬ್ಯಾಂಕ್ ಪಾಕಿಸ್ತಾನಕ್ಕೆ ಸೂಚನೆ ನೀಡಿದೆ.
ವಿವಾದಕ್ಕೆ ಸಂಬಂಧಿಸಿದಂತೆ ತಟಸ್ಥವಾಗಿರುವ ತಜ್ಞರೊಬ್ಬರನ್ನು ನೇಮಕ ಮಾಡುವಂತೆ ಭಾರತ ಬೇಡಿಕೆ ಮುಂಡಿಟ್ಟಿತ್ತು, ಈ ಬೇಡಿಕೆಯನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನಕ್ಕೆ ವಿಶ್ವಬ್ಯಾಂಕ್ ಸಲಹೆ ನೀಡಿದೆ. ಇದೇ ವೇಳೆ ಕಿಶನ್ ಗಂಗಾ ಅಣೆಕಟ್ಟಿನ ವಿಷಯವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗುವ ಆಲೋಚನೆಯನ್ನು ಕೈಬಿಡಬೇಕೆಂದು ಪಾಕಿಸ್ತಾನಕ್ಕೆ ವಿಶ್ವಬ್ಯಾಂಕ್ ಹೇಳಿದೆ.
ಮೇ ತಿಂಗಳಲ್ಲಿ ಪಾಕಿಸ್ತಾನದ ಅಟಾರ್ನಿ ಜನರಲ್ ಅಸ್ತರ್ ಔಸಾಫ್ ಅಲಿ ನೇತೃತ್ವದ ನಿಯೋಗ ವಿಶ್ವಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ರಿಸ್ಟಲಿನಾ ಜಾರ್ಜಿವ ಅವರನ್ನು ಭೇಟಿ ಮಾಡಿತ್ತು. ಪಾಕಿಸ್ತಾನದ ಮನವಿಯ ಮೇರೆಗೆ ನಡೆದ ಈ ಸಭೆಯಲ್ಲಿ ಸಿಂಧು ನದಿ ನೀರು ಹಂಚಿಕೆ ಒಪ್ಪಂದ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಗಿದ್ದು ಉಭಯ ರಾಷ್ಟ್ರಗಳೂ ಸ್ನೇಹಪರ ರೀತಿಯಲ್ಲಿ ವಿವಾದವನ್ನು ಅಂತುಅಗೊಳಿಸಿಕೊಳುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆಮಾಡಲಾಗುವುದು ಎಂದು ವಿಶ್ವಬ್ಯಾಂಕ್ ಹೇಳಿದೆ.
ಕಾಶ್ಮೀರದಲ್ಲಿನ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಗೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸುತ್ತಿದ್ದು, ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿಶನ್ ಗಂಗಾ ಜಲ ವಿದ್ಯುತ್ ಘಟಕವನ್ನು ಉದ್ಘಾಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics