ಸಂಗ್ರಹ ಚಿತ್ರ 
ದೇಶ

ಸತತ 7ನೇ ದಿನವೂ ಪೆಟ್ರೋಲ್ ದರ ಇಳಿಕೆ, ನೂತನ ದರ ಪಟ್ಟಿ ಇಲ್ಲಿದೆ!

ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ.

ನವದೆಹಲಿ: ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ.
ಮಂಗಳವಾರ ಬೆಳಗ್ಗೆ ಪೆಟ್ರೋಲ್ ದರಲ್ಲಿ 46 ರಿಂದ 49 ಪೈಸೆಯವರೆಗೂ ದರ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 34 ರಿಂದ 36 ಪೈಸೆಯಷ್ಟು ದರ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರದಲ್ಲಿ ಗಣನೀಯ ಇಳಿಕೆಯಾಗುತ್ತಿದ್ದು, ಇದೇ ಭಾರತದಲ್ಲಿನ ತೈಲ ದರ ಇಳಿಕೆಗೂ ಕಾರಣ ಎನ್ನಲಾಗುತ್ತಿದೆ. ದೆಹಲಿ, ಕೊಲ್ಕತ್ತಾ, ಮುಂಬೈ ಮತ್ತು ಚೆನ್ನೈ ಜಿಲ್ಲೆಗಳಲ್ಲಿ ಪೆಟ್ರೋಲ್ ದರದಲ್ಲಿ 14 ರಿಂದ 16 ಪೈಸೆಯಷ್ಟು ಇಳಿಕೆ ಕಂಡುಬಂದಿದೆ. ಡೀಸೆಲ್ ದರದಲ್ಲಿ 9 ರಿಂದ 10 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 79.1 ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 70.6 ರೂ ಗೆ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.
ಉಳಿದಂತೆ ದೇಶದ ವಿವಿಧೆಡೆ ಪೆಟ್ರೋಲ್ ಮತ್ತು ಡೀಸೆಲ್ ದರ ಇಂತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT