ದೇಶ

ಅಮಿತ್ ಶಾ- ಉದ್ಧವ್ ಠಾಕ್ರೆ ಗೌಪ್ಯ ಸಭೆಯಲ್ಲಿ ಫಡ್ನವೀಸ್ ಗೆ ಜಾಗವೇ ಇಲ್ಲ: ಹೊರಗೆ ಕಾಯುತ್ತಿದ್ದ ಮಹಾ ಸಿಎಂ!

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆಯವರನ್ನು ಮುಂಬೈ ನಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಮುಂಬೈ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆಯವರನ್ನು ಮುಂಬೈ ನಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. 
ಠಾಕ್ರೆಯವರ ನಿವಾಸ ಮಾತೋಶ್ರೀಯಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ-ಉದ್ಧವ್ ಠಾಕ್ರೆ ಇಬ್ಬರೇ ಸುಮಾರು ಒಂದು ಗಂಟೆಗೂ ಅಧಿಕ ಸಮಯ ರಹಸ್ಯ ಸಭೆ ನಡೆಸಿದ್ದಾರೆ. ಆದರೆ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಮಾತ್ರ ಮಾತುಕತೆ ನಡೆಯುತ್ತಿದ್ದ ಕೋಠಡಿಯಿಂದ ಹೊರಗಿದ್ದು ಕಾಯುತ್ತಿದ್ದರು. 
ಇದೇ ವೇಳೆ ಅಮಿತ್ ಶಾ ಅವರು ಶಿರೋಮಣಿ ಅಖಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರೊಂದಿಗೆ ಜೂ.07 ರಂದು ಸಭೆ ನಡೆಸಲಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎನ್ ಡಿಎ ಮಿತ್ರ ಪಕ್ಷಗಳೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್