ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಪ್ರಾಂಶುಪಾಲರ ವಿರುದ್ಧ ಸಿಬಿಐ ಪ್ರಕರಣ
ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿಯ ಪ್ರಾಂಶುಪಾಲರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ನವದೆಹಲಿ: ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿಯ ಪ್ರಾಂಶುಪಾಲರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಬೋಧಕ ಸಿಬ್ಬಂದಿಗಳ ನೇಮಕಾತಿ ವಿಷಯದಲ್ಲಿ ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನಾ ಅಧಿಕಾರಿಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ಸಂಸ್ಥೆಯ ಪ್ರಾಂಶುಪಾಲರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಓಂ ಪ್ರಕಾಶ್ ಶುಕ್ಲಾ ಆರೋಪ ಎದುರಿಸುತ್ತಿರುವ ಪ್ರಾಂಶುಪಾಲರಾಗಿದ್ದು ಪ್ರಾಂಶುಪಾಲರೊಂದಿಗೆ ರಾಜಕೀಯ ವಿಜ್ಞಾನ, ರಸಾಯನಶಾಸ್ತ್ರ ವಿಭಾಗ, ಗಣಿತ ವಿಭಾಗದ ಪ್ರಾಧ್ಯಾಪಕರುಗಳ ವಿರುದ್ಧವೂ ಸಹ ಕ್ರಿಮಿನಲ್ ಸಂಚು ರೂಪಿಸಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಅಧಿಕೃತ ಕಚೇರಿ ಹಾಗೂ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.