ಚಿದಂಬರಂ 
ದೇಶ

ಐಎನ್ಎಕ್ಸ್ ಪ್ರಕರಣ: ಸಿಬಿಐಯಿಂದ 4 ಗಂಟೆಗಳ ಕಾಲ ಚಿದಂಬರಂ ವಿಚಾರಣೆ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ...

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ಬುಧವಾರ ನಾಲ್ಕು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದೆ.
ಏರ್ಸೆಲ್-ಮ್ಯಾಕ್ಸಿಸ್ 3,500 ಕೋಟಿ ರು. ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರು.ಗಳ ಅಕ್ರಮ ವ್ಯವಹಾರದಲ್ಲಿ ಚಿದಂಬರಂ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಆದರೆ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಿದಂಬರಂ ಅವರು, ಸಿಬಿಐ ಎಫ್ಐಆರ್ ನಲ್ಲಿ ನನ್ನ ವಿರುದ್ಧ ಯಾವುದೇ ಆರೋಪ ಇಲ್ಲ ಎಂದು ಹೇಳಿದ್ದಾರೆ.
ಯುಪಿಎ-1ರ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ವಿದೇಶೀ ಹೂಡಿಕೆ ಅನುಮತಿ ನೀಡಿದ ಆರೋಪ ಎದುರಿಸುತ್ತಿದ್ದಾರೆ.
ಕಳೆದ ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್  ಜುಲೈ 3ರವರೆಗೆ ಚಿದಂಬರಂ ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ನಿಡಿತ್ತು.
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಳೆದ ವರ್ಷ ಮೇ 15ರಂದು ಎಫ್ಐಆರ್ ದಾಖಲಿಸಿತ್ತು. ಇದೇ ಪ್ರಕರಣದಲ್ಲಿ 10 ಲಕ್ಷ ರುಪಾಯಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ