ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಮಚಿಲ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಂದಿರುವ ಉಗ್ರರ ಗುಂಪೊಂದು ಗಡಿ ನುಸುಳಲು ಯತ್ನ ನಡೆಸುತ್ತಿತ್ತು.
ಗಡಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಗಮನಿಸಿದ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಸೇನೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.