ಆಪರೇಷನ್ ಬ್ಲೂ ಸ್ಟಾರ್'ಗೆ 34 ವರ್ಷ: ಸ್ವರ್ಣಮಂದಿರದಲ್ಲಿ ಹೆಚ್ಚಿದ ಭದ್ರತೆ
ಅಮೃತಸರ: ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆ ನಡೆದು ಬುಧವಾರಕ್ಕೆ 34 ವರ್ಷದ ತುಂಬಿದ ಹಿನ್ನಲೆಯಲ್ಲಿ ಪಂಜಾಬ್ ರಾಜ್ಯದ ಅಮೃತಸರದಲ್ಲಿರುವ ಸ್ವರ್ಣ ಮಂದಿರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸ್ವರ್ಣಮಂದಿರದ ಬಳಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ 5 ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಮತ್ತು ಹಲವು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.
ಈ ನಡುವ ಪಂಜಾಬ್ ರಾಜ್ಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯೊಂದನ್ನು ನಡೆಸಿದ್ದು, ಸ್ವರ್ಣಮಂದಿರದ ಬಳಿ ಕೋಮುಗಲಭೆ ಸೃಷ್ಟಿ ಮಾಡುವ ಸಲವಾಗಿ ವಿದೇಶೀ ಜನರನ್ನು ನಿಯೋಜಿಸಲು ಮುಂದಾಗಿದ್ದ ಗುಂಪೊಂದನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಪ್ರತ್ಯೇಕ ಖಾಲಿಸ್ಥಾನ ರಾಷ್ಟ್ರಕ್ಕಾಗಿ ವಿಧ್ವಂಸಕ ಮಾರ್ಗ ಹಿಡಿದಿದ್ದ ಬಂಡುಕೋರರ ನಾಯಕ ಭಿಂದ್ರನ್ ವಾಲೆ, ಸಿಕ್ಖರ ಪವಿತ್ರ ಕ್ಷೇತ್ರ ಅಮೃತಸರದ ಸ್ವರ್ಣಮಂದಿರವನ್ನೇ ತನ್ನ ಆಶ್ರಯ ತಾಣವಾಗಿಸಿಕೊಂಡಿದ್ದ. ಶಸ್ತ್ರಾಸ್ತ್ರಗಳೊಂದಿಗೆ ಅಡಗಿಕೊಂಡಿದ್ದ ಬಂಡುಕೋರರರನ್ನು ಹೊರದಬ್ಬಲು ಸೇನೆ ಹೆಣೆದಿದ್ದೇ ಈ ಆಪರೇಷನ್ ಬ್ಲೂ ಸ್ಟಾರ್.
ಈ ಸೇನಾ ಕಾರ್ಯಾಚರಣೆ ಬಗ್ಗೆ ಅನೇಕ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಆದರೆ, ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂದಿಗೂ ವಿವಾದಾಸ್ಪದ ಸೇನಾ ಕಾರ್ಯಾಚರಣೆಗಾಗಿ ಆಪರೇಷನ್ ಬ್ಲೂ ಸ್ಟಾರ್ ಗುರ್ತಿಸಿಕೊಂಡಿದೆ.
ಪಾಕಿಸ್ತಾನದ ಕುಮ್ಮಕ್ಕಿನಿಂದ ದೇಶದ ಸಾರ್ವಭೌಮತ್ವಕ್ಕೆ ಸವಾಲಾಗಿದ್ದ ಭಿಂದ್ರನ್ ವಾಲೆಯನ್ನು ಹಿಮ್ಮೆಟ್ಟಿಸುವುದು ಸರ್ಕಾರಕ್ಕೆ ಆಗಿನ ತುರ್ತು ಅಗತ್ಯವಾಗಿತ್ತು. ಅದರ ಫಲವಾಗಿಯೇ ಈ ಕಾರ್ಯಾಚರಣೆಯನ್ನು ನಡೆಸಲಾಗಿತ್ತು.
ಭಾರತ ಕಂಡ ಅತ್ಯಂತ ದಕ್ಷ ಹಾಗೂ ಪ್ರಭಾವಶಾಲಿ ಪ್ರಧಾನಿಯಾದ ಇಂದಿರಾಗಾಂಧಿಯವರು ಇಂಥಹದ್ದೊಂದು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದರು. ಪರ-ವಿರೋಧದ ಮಾತುಗಳಿಗೆ ಕಿವಿಗೊಡದೆ ಭಿಂದ್ರನ್ ವಾಲೆಯನ್ನು ಮಟ್ಟ ಹಾಕಲು ಸೇನೆಗೆ ಸೂಚನೆ ನೀಡಿದ್ದರು. ಇದರಂತೆ ಸ್ವರ್ಣ ಮಂದಿರಕ್ಕೆ ನುಗ್ಗಿದ್ದ ಸೈನಿಕರು ಸಿಕ್ಕ ಉಗ್ರರನ್ನು ಮುಗಿಸಿ ಬಿಡುವ ಆಪರೇಶನ್ ಬ್ಲೂ ಸ್ಟಾರ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದರು.
ಇದಾದ ಬಳಿಕ ಆಂದಿನಿಂದ ಇಂದಿನ ವರೆಗೂ ಪ್ರತೀ ವರ್ಷ ಈ ದಿನದಂದು ಸಿಕ್ಖರು 'ಆಪರೇಶನ್ ಬ್ಲ್ಯೂ ಸ್ಟಾರ್ ಸ್ಮರಣ' ವರ್ಷಾಚರಣೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos