ಪ್ರಣಬ್ ಮುಖರ್ಜಿ ಅವರನ್ನು ಸ್ವಾಗತಿಸುತ್ತಿರುವ ಮೋಹನ್ ಭಾಗವತ್‌ 
ದೇಶ

ಆರ್‏ಎಸ್ಎಸ್ ಸಂಸ್ಥಾಪಕ ಹೆಡಗೇವಾರ್‌ ಭಾರತ ಮಾತೆಯ ಹೆಮ್ಮೆಯ ಪುತ್ರ: ಪ್ರಣಬ್ ಮುಖರ್ಜಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‏ಎಸ್ಎಸ್)ದ ಸಂಸ್ಥಾಪಕ ಕೆಬಿ ಹೆಡಗೇವಾರ್ ಭಾರತ ಮಾತೆಯ ಹೆಮ್ಮೆಯ ಪುತ್ರ ....

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‏ಎಸ್ಎಸ್)ದ ಸಂಸ್ಥಾಪಕ ಕೆಬಿ ಹೆಡಗೇವಾರ್ ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರು ಆರ್‏ಎಸ್ಎಸ್ ಪ್ರಧಾನ ಕಚೇರಿಯಲ್ಲಿರುವ ವೀಕ್ಷಕರ ಪುಸ್ತಕದಲ್ಲಿ ಬರೆದಿದ್ದಾರೆ.
ಪ್ರಣಬ್ ಮುಖರ್ಜಿ ಅವರು ಆರ್‏ಎಸ್ಎಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವುದಕ್ಕಾಗಿ ಇಂದು ಮಹಾರಾಷ್ಟ್ರದ ನಾಗ್ಪುರಕ್ಕೆ ಆಗಮಿಸಿದ್ದು, ಅವರನ್ನು ಆರ್‏ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ನಂತರ ಕಚೇರಿಯಲ್ಲಿದ್ದ ಹಾಜರಿ ಪುಸ್ತಕದಲ್ಲಿ ಸಹಿ ಹಾಕಿದ ಪ್ರಣಬ್‌ ಮುಖರ್ಜಿ ಅವರು ಹೆಡಗೇವಾರ್ ಗೆ ವಿಶೇಷ ಗೌರವ ಸಲ್ಲಿಸಿದರು. 
ಭಾರತ ಮಾತೆಯ ಹೆಮ್ಮೆಯ ಪುತ್ರ, ಕೆ.ಬಿ. ಹೆಡಗೇವಾರ್‌ ಜನ್ಮಸ್ಥಳಕ್ಕೆ ಆಗಮಿಸಿದ್ದೇನೆ. ಈ ಧೀಮಂತ ನಾಯಕನಿಗೆ ಗೌರವ ಸಲ್ಲಿಸಲು ಇಲ್ಲಿಗೆ ಆಗಮಿಸಿದ್ದೇನೆ ಎಂದು ಪ್ರಣಬ್‌ ಮುಖರ್ಜಿ ವೀಕ್ಷಕರ ಹಾಜರಿ ಪುಸ್ತಕದಲ್ಲಿ ಬರೆದು ತಮ್ಮ ಸಹಿ ಹಾಕಿದ್ದಾರೆ. 
ಪ್ರಣಬ್‌ ಮುಖರ್ಜಿ ಅವರು ಆರ್‏ಎಸ್ಎಸ್ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದು, ತೀವ್ರ ವಿರೋಧ ಹಾಗೂ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!