ದೇಶ

ಅಗ್ಗದ ದರದಲ್ಲಿ ಜನರಿಗೆ ಆರೋಗ್ಯ ಸೇವೆ ದೊರಕಬೇಕು : ಪ್ರಧಾನಿ ಮೋದಿ

Sumana Upadhyaya

ನವದೆಹಲಿ: ಅನಾರೋಗ್ಯ ಮತ್ತು ವಿವಿಧ ರೋಗಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಆರ್ಥಿಕ ಹೊರೆ ತೀವ್ರವಾಗುತ್ತಿದೆ. ಪ್ರತಿಯೊಬ್ಬ ಭಾರತೀಯನಿಗೂ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಸಿಗುವಂತಾಗಬೇಕೆಂಬುದು ನಮ್ಮ ಸರ್ಕಾರದ ನಿರಂತರ ಪ್ರಯತ್ನವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯಲ್ಲಿಂದು ಮಾತನಾಡಿದ ಅವರು ಕೇಂದ್ರ ಸರ್ಕಾರ ಸ್ಟೆಂಟ್ಸ್ ಗಳ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಬಹಳ ಪ್ರಯೋಜನವಾಗಿದೆ ಎಂದರು.

ಆರೋಗ್ಯ ಭಾರತ ನಿರ್ಮಾಣದಲ್ಲಿ ಸ್ವಚ್ಛ ಭಾರತ ಅಭಿಯಾನ ಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯ ಫಲಾನುಭವಿಗಳೊಂದಿಗೆ ಇಂದು ಬೆಳಗ್ಗೆ ನಮೋ ಆಪ್ ಮೂಲಕ ನೇರ ಸಂವಾದ ನಡೆಸಿದರು.

SCROLL FOR NEXT