ರಾಮ ಮಂದಿರ ನಿರ್ಮಾಣ ಕುರಿತು ಮಾತುಕತೆ ನಡೆಸಲು ಸಿಎಂ ಯೋಗಿ ಆದಿತ್ಯನಾಥ್'ರನ್ನು ಭೇಟಿ ಮಾಡಿದ ಸಾಧು, ಸಂತರು 
ದೇಶ

'ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ': ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭರವಸೆ

ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭರವಸೆ ನೀಡಿದ್ದಾರೆ...

ಲಖನೌ; ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ೆರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭರವಸೆ ನೀಡಿದ್ದಾರೆ. 
ರಾಮ ಮಂದಿರ ನಿರ್ಮಾಣ ಕುರಿತಂತೆ ರಾಮಜನ್ಮಭೂಮಿ ನ್ಯಾಸದ ಮುಖಂಡ ಮಹಂತ ಪರಮಹಂಸ ರಾಮಚಂದ್ರ ದಾಸ್ ಸೇರಿದಂತೆ ಹಲವು ಸಾಧು, ಸಂತರು ಇಂದು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ. 
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ರಾಮ ಮಂದಿರ ನಿರ್ಮಾಣ ಕುರಿತು ಮಾತುಕತೆ ನಡೆಸಿದೆವು. ಈ ವೇಳೆ ಶೀಘ್ರದಲ್ಲಿಯೇ ಮಂದಿರ ನಿರ್ಮಾಣ ಮಾಡುತ್ತೇವೆಂದು ಯೋಗಿ ಆದಿತ್ಯನಾಥ್ ಅವರು ಭರವಸೆ ನೀಡಿದ್ದಾರೆಂದು ಮಹಂತ್ ಸುರೇಸ್ ದಾಸ್ ಅವರು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು, 2019ರಲ್ಲಿ ಪ್ರಧಾನಮಂತ್ರಿ ಹುದ್ದೆ ಖಾಲಿಯಿರುವುದಿಲ್ಲಪ. ದೇಶದ ಜನತೆಯ ಅಭ್ಯುದಯದ ದೃಷ್ಟಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯದಿಂದಾಗಿ ಪ್ರಧಾನಿ ಮೋದಿ ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದಾರೆ. ಬಿಜೆಪಿಯು 2019ರ ಚುನಾವಣೆಯಲ್ಲಿ ಅಭಿವೃದ್ಧಿ, ಅಭಿವೃದ್ಧಿ, ಅಭಿವೃದ್ಧಿ ವಿಷಯವನ್ನೇ ಮುಂದಿಟ್ಟುಕೊಂಡು ಹೋರಾಟ ನಡೆಸಲಿದೆ. ಹಿಂದುತ್ವ ಮತ್ತು ಮಂದಿರ ವಿಚಾರಗಳಲ್ಲಿ ಇಲ್ಲಿ ಅವಕಾಶವಿಲ್ಲ. ದೇಶದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತವಾಗಿದ್ದಾರೆಂದು ಹೇಳಿದ್ದರು.
ಈ ಹೇಳಿಕೆಗೆ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಮಹಂತ್ ಸುರೇಸ್ ದಾಸ್ ಅವರು,  ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಯಸುತ್ತಿರುವುದೇ ಆದರೆ, ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಮಾಡಬೇಕು. ಒಂದು ವೇಳೆ ಇದರಲ್ಲಿ ವಿಫಲವಾಗಿದ್ದೇ ಆದರೆ, ಮುಂಬರುವ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಗುತ್ತದೆ ಅಯೋಧ್ಯೆಯಲ್ಲಿ ಬಿಜೆಪಿ ರಾಮ ಮಂದಿರ ನಿರ್ಮಾಣ ಮಾಡದೆ ಹೋದರೆ, ಬಿಜೆಪಿ ವಿರುದ್ಧ ಚಳುವಳಿ ಸಂಘಟಿಸಿ ಖಂಡಿತವಾಗಿಯೂ ಸೋಲು ಕಾಣುವಂತೆ ಮಾಡುತ್ತೇವೆಂದು ಎಚ್ಚರಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!