ಸಂಗ್ರಹ ಚಿತ್ರ 
ದೇಶ

ಪ್ರಣಬ್ ಮುಖರ್ಜಿ ಭಾಷಣ ಕುರಿತು ಪಿ.ಚಿದಂಬರಂ ಮೆಚ್ಚುಗೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಡಿದ ಮಾತುಗಳು ಛಾಟಿ ಏಟು ನೀಡಿದಂತಿತ್ತು ಎಂದು ಮಾಜಿ ಕೇಂದ್ರ ವಿತ್ತ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬಂರಂ ಹೇಳಿದ್ದಾರೆ.

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಡಿದ ಮಾತುಗಳು ಛಾಟಿ ಏಟು ನೀಡಿದಂತಿತ್ತು ಎಂದು ಮಾಜಿ ಕೇಂದ್ರ ವಿತ್ತ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬಂರಂ ಹೇಳಿದ್ದಾರೆ.
ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅವರು ಪಾಲ್ಗೊಂಡು ನೀಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, 'ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿರುವ ಉತ್ತಮ ಅಂಶಗಳನ್ನು ಎತ್ತಿಹಿಡಿಯುವ ಮೂಲಕ,  ಆರ್ ಎಸ್ ಎಸ್ಸಿದ್ಧಾಂತದಲ್ಲಿರುವ ದೋಷಗಳನ್ನೂ ಪ್ರಣಬ್ ಮುಖರ್ಜಿ ತೋರಿಸಿಕೊಟ್ಟಿದ್ದಾರೆ.  ಆರ್ ಎಸ್ ಎಸ್ಸಿದ್ಧಾಂತದಲ್ಲಿ ದೋಷವಿದೆ ಎಂಬುದನ್ನು ತಿಳಿಸುವುದಕ್ಕೆ ಅವರಾಡಿದ ವಿಭಿನ್ನ ಶೈಲಿ ಮಾತುಗಳನ್ನು ಕಂಡು ಸಂತಸವಾಯಿತು" ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿರುವ  ಆರ್ ಎಸ್ ಎಸ್ಕೇಂದ್ರ ಕಚೇರಿಯಲ್ಲಿ ನಡೆದ ಮೂರನೇ ವರ್ಷದ ಶಿಕ್ಷಾ ವರ್ಗ್ ನಲ್ಲಿ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಭಾಗವಹಿಸಿದ್ದರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗಿಟ್ಟು  ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಣಬ್ ನಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅತ್ತ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಹೋಗುವ ಪ್ರಣಬ್ ನಿರ್ಧಾರಕ್ಕೆ ಎಲ್ಲಡೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತಾದರೂ, ಚಿದಂಬರಂ ಮಾತ್ರ ಅವರಿಗೆ ಬೆಂಬಲ ನೀಡಿದ್ದರು. ಅಲ್ಲದೆ ಆರ್ ಎಸ್ ಎಸ್ ಅವರಿಗೆ ಅವರ ತಪ್ಪೇನು ಎಂದು ತಿಳಿಸಿ ಎಂದು ಟ್ವೀಟ್ ಮಾಡುವ ಮೂಲಕ ಹೇಳಿದ್ದರು.
ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ  ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ ಸಂಘದ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ್ ಅವರನ್ನು ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಕರೆದಿದ್ದರು. ಅಂತೆಯೇ ವಿವಿಧತೆಯಲ್ಲಿ ಏಕತೆ ನಮ್ಮ ದೊಡ್ಡ ಶಕ್ತಿ ಎಂದು ಭಾರತವನ್ನು ಹಾಡಿ ಹೊಗಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ