ಶ್ರೀನಗರ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರದಲ್ಲಿ ರಂಜಾನ್ ಕದನ ವಿರಾಮ ವಿಸ್ತರಣೆಯ ಸುಳಿವನ್ನು ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಲಾಗುವುದು ಹಾಗೂ ಕದನ ವಿರಾಮದ ನಂತರದ ಪರಿಸ್ಥಿತಿಯ ಬಗ್ಗೆ ಭದ್ರತಾ ಪರಾಮರ್ಶನಾ ಸಭೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ಇತ್ತೀಚಿಗೆ ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿಯನ್ನು ಖಂಡಿಸಿದ ರಾಜನಾಥ್ ಸಿಂಗ್, ಪವಿತ್ರ ರಂಜಾನ್ ಮಾಸದಲ್ಲೂ ಉಗ್ರರು ದೌರ್ಜನ್ಯ ಚಟುವಟಿಕೆಯಿಂದ ದೂರ ಸರಿದಿಲ್ಲ ಎಂದರು.
ಆದರೆ, ಪ್ರತಿಯೊಬ್ಬರ ಜೊತೆಗೂ ಮಾತುಕತೆ ನಡೆಸಲಾಗುವುದು, ಸಮಾನ ಮನಸ್ಕ ಜನರೊಂದಿಗೆ ಮಾತ್ರ ಮಾತುಕತೆ ನಡೆಸುವ ಅಗತ್ಯವಿಲ್ಲ. ಪ್ರತ್ಯೇಕತಾವಾದಿಗಳೊಂದಿಗೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.