ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ, ಚತ್ತೀಸ್ ಗಢ ಮೇಲೆ ಬಿಜೆಪಿ ಕಣ್ಣು
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕಾಂಗ್ರೆಸ್ ನ ನಾಲ್ಕು ತಲೆಮಾರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ
ಅಂಬಿಕಾಪುರ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕಾಂಗ್ರೆಸ್ ನ ನಾಲ್ಕು ತಲೆಮಾರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಾನುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ಚತ್ತೀಸ್ ಘಡ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಅಂಬಿಕಾಪುರದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಳೆದ ನಾಲ್ಕು ವರ್ಷಗಳ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಕೇಳುವ ರಾಹುಲ್ ಗಾಂಧಿ, ದೇಶದಲ್ಲಿ 55 ವರ್ಷಗಳ ಕಾಂಗ್ರೆಸ್ ಆಡಳಿತದ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಸರ್ಕಾರ ಏನು ಮಾಡಿದೆ ಎಂದು ಪದೇ ಪದೇ ಕೇಳುತ್ತಿದ್ದಾರೆ. ಆದರೆ ನಾವು ಅದನ್ನು ನಿಮಗೆ ಏಕೆ ಹೇಳಬೇಕು. ಮತ ಕೇಳಲು ಹೋದಾಗ ನಾವು ನಾಲ್ಕು ವರ್ಷಗಳಲ್ಲಿ ಏನು ಮಾಡಿದ್ದೇವೆ ಎಂಬುದನ್ನು ಮತದಾರರಿಗೆ ತಿಳಿಸುತ್ತೇವೆ ಎಂದರು.
ಕೆಲವು ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದೇವೆಂದು ರಾಹುಲ್ ಬಾಬಾ ಖುಷಿಪಡುತ್ತಿದ್ದಾರೆ. ಅವರಿಂದ 14 ರಾಜ್ಯಗಳಿಂದ ಅಧಿಕಾರ ಕಸಿದುಕೊಂಡಿದ್ದೇವೆಂದು ಗೊತ್ತೇ ಇಲ್ಲ ಅವರಿಗೆ ಎಂದು ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.