ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ
ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಆರ್ ಎಸ್ ಎಸ್ ಚಿಂತನೆ ನಡೆಸಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಆರೋಪಿಸಿದ ಬೆನ್ನಲ್ಲೇ ನಮ್ಮ ತಂದೆ ಮತ್ತೆ ಸಕ್ರಿಯ ರಾಜಕಾರಣ ಪ್ರವೇಶಿಸುವುದಿಲ್ಲ ಎಂದು ಪ್ರಣಬ್ ಪುತ್ರಿ ಶರ್ಮಿಷ್ಠಾ ಅವರು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಸ್ಥಾನಗಳು ಬರದೇ ಇದ್ದಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿಯಾಗಿ ಆರೆಸ್ಸೆಸ್ ಬಿಂಬಿಸುವ ಸಾಧ್ಯತೆಯಿದೆ ಎಂದು ಸಂಜಯ್ ರಾವುತ್ ಹೇಳಿದ್ದರು.
'ಭಾರತದ ರಾಷ್ಟ್ರಪತಿಯಾಗಿ ನಿವೃತ್ತರಾದ ಬಳಿಕ ನನ್ನ ತಂದೆಯವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಬರುವುದಿಲ್ಲ. ಇದನ್ನು ನೆನಪಿಟ್ಟುಕೊಳ್ಳಿ ಮಿ. ರಾವುತ್' ಎಂದು ಶರ್ಮಿಷ್ಠಾ ಮುಖರ್ಜಿ ಟ್ವೀಟ್ ಮಾಡಿದ್ದಾರೆ.