ಕರ್ನಾಟಕದಲ್ಲಿನ ಸಮ್ಮಿಶ್ರ ಸರ್ಕಾರ ಅಸ್ತಿತ್ವದ ಸಂದರ್ಭದಲ್ಲಿದ್ದ ವಿರೋಧ ಪಕ್ಷಗಳ ನಾಯಕರ ಚಿತ್ರ 
ದೇಶ

2019ರ ಚುನಾವಣೆ ನಂತರ ವಿರೋಧಪಕ್ಷಗಳ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ನಿರ್ಧಾರ-ಜೆಡಿಎಸ್

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ನಂತರ ವಿರೋಧಪಕ್ಷಗಳ ಒಕ್ಕೂಟದ ಪ್ರಧಾನಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಆಲಿ ಹೇಳಿದ್ದಾರೆ.

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ನಂತರ ವಿರೋಧಪಕ್ಷಗಳ ಒಕ್ಕೂಟದ ಪ್ರಧಾನಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಜೆಡಿಎಸ್  ರಾಷ್ಟ್ರೀಯ ಕಾರ್ಯದರ್ಶಿ  ಡ್ಯಾನಿಶ್ ಆಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಸಮಾನ ಮನಸ್ಕ ಪಕ್ಷಗಳೆಲ್ಲವೂ ಒಗ್ಗೂಡಿ ಹೋರಾಟ ನಡೆಸುವಂತೆ ಅವರು ಮನವಿ ಮಾಡಿದ್ದಾರೆ. ಚುನಾವಣೆ ನಂತರ ಪ್ರಧಾನಿ ಆಯ್ಕೆಗೆ ಸಂಬಂಧಿಸಿದಂತೆ  ಹಿಂದಿನ ಮೂರು ನಿದರ್ಶಗಳನ್ನು ಅವರು ವಿವರಿಸಿದ್ದಾರೆ.
1996ರ ನಂತರ ವಿ. ಪಿ. ಸಿಂಗ್ ಅವರನ್ನು ಪ್ರಧಾನಿಯಾಗಿದ್ದರು. ಲೋಕಸಭಾ ಚುನಾವಣೆ ನಂತರ ಹೆಚ್ ಡಿ ದೇವೇಗೌಡ ಅವರನ್ನು ಮೈತ್ರಿ ಸರ್ಕಾರದ ಪ್ರಧಾನಿಯನ್ನಾಗಿ ಮಾಡಲಾಗಿತ್ತು. ಯುಪಿಎ 1 ರ ಆಡಳಿತಾವಧಿಯಲ್ಲೂ ಹೀಗೆಯೇ  ಡಾ.ಮನ್ ಮೋಹನ್ ಸಿಂಗ್ ಅವರನ್ನು ಪ್ರಧಾನಿಯನ್ನಾಗಿ ಆರಿಸಲಾಗಿತ್ತು ಎಂದು ಅವರು ಹೇಳಿದರು.
ಸಾರ್ವತ್ರಿಕ ಚುನಾವಣೆಯ ನಂತರ ಬಹು ಪಕ್ಷ ಪ್ರಜಾಪ್ರಭುತ್ವದ ನಾಯಕತ್ವದ  ಸಮಸ್ಯೆ ಎದುರಾಗುತ್ತದೆ.  ಒಮ್ಮತದಿಂದ ಪ್ರಧಾನಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಡ್ಯಾನಿಶ್ ಆಲಿ ತಿಳಿಸಿದರು.
ಕರ್ನಾಟಕದಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಲ್ಲಿ ಎಲ್ಲ ವಿರೋಧಪಕ್ಷಗಳು ಪ್ರಮುಖ ಪಾತ್ರ ವಹಿಸಿದ್ದು, ಮುಂದಿನ ಲೋಕಸಭಾ ಚುನಾವಣೆ ವೇಳೆಯಲ್ಲೂ ಎಲ್ಲ ವಿರೋಧಪಕ್ಷಗಳು ಒಗ್ಗೂಡುವ ವಿಶ್ವಾಸವಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT