ನವದೆಹಲಿ; ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಕಡಿಮೆ ಹಾಜರಾತಿ ಹೊಂದಿದ್ದಾರೆಂದು ಗಂಭೀರ ಆರೋಪ ಮಾಡಿದ್ದ ಆಮ್ ಆದ್ಮಿ ಪಕ್ಷದ ಉಚ್ಛಾಟಿತ ಮುಖಂಡ ಕಪಿಲ್ ಮಿಶ್ರಾ ಅವರು ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲು ದೆಹಲಿ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ.
ಈ ಹಿಂದೆ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕಪಿಲ್ ಮಿಶ್ರಾ ಅವರು, ವಿಧಾನಸಭೆಯಲ್ಲಿ ಕೇಜ್ರಿಲವಾಲ್ ಅವರು, ಶೇ.10ಕ್ಕಿಂತಲೂ ಕಡಿಮೆ ಹಾಜರಾತಿಯನ್ನು ಹೊಂದಿದ್ದಾರೆಂದು ಆರೋಪ ಮಾಡಿದ್ದರು.
ಈ ಕುರಿತಂತೆ ದೆಹಲಿ ನ್ಯಾಯಾಲಯದಲ್ಲಿ ಅರ್ಜಿಯೊಂದರನ್ನು ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ಜೂನ್.12ರಂದು ನಡೆಸುವುದಾಗಿ ನ್ಯಾಯಾಲಯದ ತಿಳಿಸಿದ್ದು, ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿದೆ.
ನ್ಯಾಯಾಲಯದ ಅನುಮತಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಪಿಲ್ ಮಿಶ್ರಾ ಅವರು, ದೆಹಲಿ ವಿಧಾನಸಭೆಯಲ್ಲಿ ನಡೆಯುವ ಅಧಿವೇಶನಗಳಿಗೆ ಹಾಜರಾಗುವಂತೆ ನ್ಯಾಯಾಲಯ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಬೇಕು. ಇದಲ್ಲದೆ, ರಾಜ್ಯಪಾಲರು ಹಾಗೂ ವಿಧಾನಸಭಾ ಸ್ಪೀಕರ್ ಗಳಿಗೂ ಸೂಚನೆ ನೀಡಿ, ಮುಖ್ಯಮಂತ್ರಿಗಳು ಅಧಿವೇಶನಕ್ಕೆ ಹಾಜರಾಗುವಂತೆ ಸೂಚಿಸಬೇಕೆಂದು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಶೇ.10ಕ್ಕಿಂತಲೂ ಕಡಿಮೆ ಹಾಜರಾತಿಯನ್ನು ಹೊಂದಿದ್ದಾರೆ. ವಿಶೇಷ ಅಧಿವೇಶನಗಳಿಗೂ ಹಾಜರಾಗುವುದಿಲ್ಲ. ಕೇವಲ 2 ಗಂಟೆಗಳ ಕಾಲ ಮಾತ್ರ ವಿಧಾನಸಭೆಯಲ್ಲಿರುತ್ತಾರೆ. ಇದು ಮತ ಹಾಕಿದ ದೆಹಲಿ ಜನತೆಗೆ ಅವಮಾನ ಮಾಡಿದಂತೆ. ಅಧಿವೇಶನಕ್ಕೆ ಕೇಜ್ರಿವಾಲ್ ಅವರು ಸರಿಯಾಗಿ ಹಾಜರಾಗದಿದ್ದರೆ, ಅವರ ವೇತನವನ್ನು ಕಡಿತಗೊಳಿಸಬೇಕೆಂದು ತಿಳಿಸಿದ್ದಾರೆ.