ಶಿಲ್ಪಾಶೆಟ್ಟಿ, ರಾಜ್ ಕುಂದ್ರಾ
ಮುಂಬಯಿ: ಬಿಟ್ ಕಾಯಿನ್ ಹಗರಣ ಸಂಬಂಧ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಸೈಬರ್ ಸೆಲ್ ಹಾಗೂ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ, ಜಾರಿನಿರ್ದೇಶನಾಲಯ ಅಧಿಕಾರಿಗಳು ಪ್ರಕರಣವನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ.
ಸುಮಾರು 2000 ಕೋಟಿ ರೂ.ಗಳ ಬಹುಕೋಟಿ ಬಿಟ್ ಕಾಯಿನ್ (ಭಾರತದಲ್ಲಿ ನಿಷೇಧಗೊಂಡಿರುವ ವರ್ಚುವಲ್ ಅಥವಾ ಡಿಜಿಟಲ್ ಕರೆನ್ಸಿ) ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಜೂನ್ 5 ರಂದು ಸಮನ್ಸ್ ಜಾರಿ ಮಾಡಿತ್ತು. . ಇದಕ್ಕೆ ಸಂಬಂಧಿಸಿದಂತೆ ಕುಂದ್ರಾ ಅವರನ್ನು ಇಡಿ ಅಧಿಕಾರಿಗಳು ಪ್ರಶ್ನಿಸಿದ್ದರು..
ಈ ಹಗರಣದ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯಕ್ಕೆ ಅಮಿತ್ ಭಾರದ್ವಾಜ್ ಎಂಬ ಆರೋಪಿ ಕೊಟ್ಟ ಸುಳಿವಿನ ಮೇಲೆ ರಾಜ್ ಕುಂದ್ರಾ ಹೆಸರು ಬಹಿರಂಗವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics