ದೇಶ

ಉತ್ತರ ಪ್ರದೇಶ: ಭೀಕರ ಬಸ್ ಅಪಘಾತ, 17 ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ

Srinivasamurthy VN
ಪಾಟ್ನಾ: ಉತ್ತರ ಪ್ರದೇಶದಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಸುಮಾರು 17 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 17 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಂತೆಯೇ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತಕ್ಕೆ ಬಸ್ ನ ಅತಿಯಾದ ವೇಗವೇ ಕಾರಣ ಎಂದು ಶಂಕಿಸಲಾಗಿದೆ. ಅತಿಯಾದ ವೇಗದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. 
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
SCROLL FOR NEXT