ಕಟ್ಟಡದಲ್ಲಿನ ಬೆಂಕಿ ಚಿತ್ರ 
ದೇಶ

ಮುಂಬೈ: ದೀಪಿಕಾ ಪಡುಕೋಣೆ ಫ್ಲಾಟ್ ಕಟ್ಟಡದಲ್ಲಿ ಬೆಂಕಿ, 90 ಮಂದಿ ಪ್ರಾಣಾಪಾಯದಿಂದ ಪಾರು

ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಾಸವಿರುವ ಇಲ್ಲಿನ ವೊರ್ಲಿಯ 33 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮುಂಬೈ: ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಅವರು ವಾಸ್ತವ್ಯ ಹೂಡಿದ್ದ ಫ್ಲಾಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಪ್ರಭಾದೇವಿ ನಗರದಲ್ಲಿರುವ  34 ಅಂತಸ್ತಿನ ಬೆಹುಮಂಡೆ ಕಟ್ಟಡದ ಕೊನೆಯ ಅಂತಸ್ತಿನಲ್ಲಿ  ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ. ಈ ಸಂದರ್ಭದಲ್ಲಿ  ದೀಪಿಕಾ ಪಡುಕೋಣೆ ಇರಲಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಅವರ ಆಪ್ತರು ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆ ಈ ಕಟ್ಟಡ ಒಂದು ಅಂತಸ್ತಿನಲ್ಲಿ ವಾಸ್ತವ್ಯ ಹೂಡಿದ್ದು, ಮತ್ತೊಂದು ಅಂತಸ್ತಿನಲ್ಲಿ ಕಚೇರಿ ಹೊಂದಿದ್ದಾರೆ. ಬೆಂಕಿಯಿಂದಾಗಿ ಎರಡು ಅಂತಸ್ತಿಗೂ ಯಾವುದೇ ಹಾನಿಯಾಗಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಮಧ್ಯಾಹ್ನ 2-08 ರ ಸುಮಾರಿನಲ್ಲಿ ಈ ಅಗ್ನಿ ಅವಘಡ ಉಂಟಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ  90 ಮಂದಿಯನ್ನು ಸುರಕ್ಷಿತವಾಗಿ ಪಾರು ಮಾಡಿದ್ದಾರೆ .ಯಾರೊಬ್ಬರೂ ಕೂಡಾ ಗಾಯಗೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್