ದೇಶ

ಲೆಫ್ಟಿನೆಂಟ್ ಗೌರ್ನರ್ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ: ಆಪ್ ನಾಯಕರನ್ನು ತಡೆದ ಪೊಲೀಸರು

Srinivas Rao BV
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಪ್ರತಿಭಟನಾ ಮೆರವಣಿಗೆ ತೆರಳಿದ್ದ ಆಮ್ ಆದ್ಮಿ ಪಕ್ಷದ ನಾಯಕರನ್ನು ಪೊಲೀಸರು ತಡೆದಿದ್ದಾರೆ. 
ಐಎಎಸ್  ಅಧಿಕಾರಿಗಳು ತಮ್ಮ ಮುಷ್ಕರ ನಿಲ್ಲಿಸುವಂತೆ ಗವರ್ನರ್ ನಿರ್ದೇಶನ ನೀಡಬೇಕು. ನಾಲ್ಕು ತಿಂಗಳಿನಿಂದ ಕೆಲಸ ಮಾಡದೆ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಆಮ್ ಆದ್ಮಿ ಪಕ್ಷದ ನಾಯಕರು ದೆಹಲಿ ಲೆಫ್ಟಿನೆಂಟ್ ಗೌರ್ನರ್ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಸತತ ಮೂರನೇ ದಿನವೂ ಮುಂದುವರೆದಿದ್ದು, ಜೂ.13 ರಂದು ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಆಪ್ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ್ದರು.  ಆದರೆ ಲೆಫ್ಟಿನೆಂಟ್ ಗೌರ್ನರ್ ನಿವಾಸದ ಮುಂಭಾಗದಲ್ಲಿ ಆಮ್ ಆದ್ಮಿ ಪಕ್ಷದ ನಾಯಕರನ್ನು ಪೊಲೀಸರು ತಡೆದಿದ್ದಾರೆ. 
ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಆಮ್ ಆದ್ಮಿ ಪಕ್ಷದ ನಾಯಕರು ಪ್ರಾರಂಭಿಸಿದ್ದ ಪ್ರತಿಭಟನಾ ಮೆರವಣಿಗೆಗೆ ಮಾಜಿ ಕೇಂದ್ರ ಸಚಿವ, ಮಾಜಿ ಬಿಜೆಪಿ ನಾಯಕ ಯಶ್ವಂತ್ ಸಿನ್ಹಾ ಸಾಥ್ ನೀಡಿದ್ದರು. ದೆಹಲಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಮತ್ತು ಅವರ ಕ್ಯಾಬಿನೆಟ್ ಸಹೋದ್ಯೋಗಿಗಳು  ಲೆ.ಗವರ್ನರ್ ಕಛೇರಿಯಲ್ಲಿ ಇಡೀ ರಾತ್ರಿ ಪ್ರತಿಭಟನೆ ನಡೆಸಿದ್ದರು. ಆಮ್ ಆದ್ಮಿ ಪಕ್ಷದ ನಡೆಯನ್ನು ಬಿಜೆಪಿ ಖಂಡಿಸಿದ್ದು,  ದೆಹಲಿ ಸಿಎಂ ನಡೆ ಪ್ರಜಾಪ್ರಭುತ್ವದ ಅಣಕ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 
SCROLL FOR NEXT