ಪನಾರ್ ಅರಣ್ಯ ಪ್ರದೇಶದಲ್ಲಿ ಸೇನೆಯಿಂದ ಉಗ್ರ ನಿಗ್ರಹ ಕಾರ್ಯಾಚರಣೆ 
ದೇಶ

'ಉಗ್ರ ನಿಗ್ರಹ': ಯೋಧನ ಸಾವಿನ ಬೆನ್ನಲ್ಲೇ ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಕಣೆವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಸೇನಾ ಕಾರ್ಯಾಚರಣೆ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಇದರ ಬೆನ್ನಲ್ಲೇ ನಡೆದ ಕಾರ್ಯಾಚರಣೆಯಲ್ಲಿ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರ: ಕಣೆವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಸೇನಾ ಕಾರ್ಯಾಚರಣೆ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಇದರ ಬೆನ್ನಲ್ಲೇ ನಡೆದ ಕಾರ್ಯಾಚರಣೆಯಲ್ಲಿ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಪನಾರ್ ಅರಣ್ಯ ಪ್ರದೇಶದಲ್ಲಿ ಉಗ್ರರ ಚಟುವಟಿಕೆಗಳ ಕುರಿತು ಮಾಹಿತಿ ಪಡೆದ ಸೈನಿಕರು ಕೂಡಲೇ ಅರಣ್ಯವನ್ನು ಸುತ್ತುವರೆದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದರು. ಸೈನಿಕರು ಸುತ್ತುವರೆದ ವಿಚಾರ ತಿಳಿಯುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ ಓರ್ವ ಯೋಧನಿಗೆ ಗುಂಡೇಟು ತಗುಲಿ ಆತ ಹುತಾತ್ಮನಾಗಿದ್ದಾನೆ. 
ಬಳಿಕ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ದಾಳಿ ತೀವ್ರಗೊಂಡಿದ್ದು, ಯೋಧರಿಂದ ನಡೆದ ತೀವ್ರ ಪ್ರತಿದಾಳಿ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನಾ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಶಂಕೆ ಇದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ. ಅಲ್ಲದೆ ಸಮೀಪದ ಗ್ರಾಮಗಳಿಗೂ ಮುನ್ನೆಚ್ಚರಿಕೆ ರವಾನಿಸಲಾಗಿದ್ದು, ಗಡಿ ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್