ದೇಶ

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಉಗ್ರರ ದಾಳಿ, ಕಾರ್ಯಾಚರಣೆಗಿಳಿದ ಸೇನಾಪಡೆ

Manjula VN
ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸಿಆರ್'ಪಿಎಫ್ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ. 
ಉತ್ತರ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಗಂಗೂ ಎಂಬ ಪ್ರದೇಶದಲ್ಲಿದ್ದ ಸಿಆರ್'ಪಿಎಫ್ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ದಾಳಿ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದು, ಉಗ್ರರಿಗಾಗಿ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
SCROLL FOR NEXT