ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ 
ದೇಶ

ನಿಫಾ ವೈರಸ್ ಸಂಪೂರ್ಣ ನಿಯಂತ್ರಣದಲ್ಲಿದೆ; ಕೇರಳ ಆರೋಗ್ಯ ಸಚಿವೆ

ದೇಶದಾದ್ಯಂತ ಭಾರೀ ಆತಂಕವನ್ನು ಸೃಷ್ಟಿಸಿದ್ದ ನಿಫಾ ವೈರಸ್ ಪ್ರಸ್ತುತ ನಿಯಂತ್ರಣದಲ್ಲಿದೆ, ಹೊಸದಾಗಿ ವೈರಸ್ ತಗಲುವ ಸಾಧ್ಯತೆಗಳು ತೀರಾ ಕಡಿಮೆಯಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ...

ತಿರುವನಂತಪುರ: ದೇಶದಾದ್ಯಂತ ಭಾರೀ ಆತಂಕವನ್ನು ಸೃಷ್ಟಿಸಿದ್ದ ನಿಫಾ ವೈರಸ್ ಪ್ರಸ್ತುತ ನಿಯಂತ್ರಣದಲ್ಲಿದೆ, ಹೊಸದಾಗಿ ವೈರಸ್ ತಗಲುವ ಸಾಧ್ಯತೆಗಳು ತೀರಾ ಕಡಿಮೆಯಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮೇ.31ರ ಬಳಿಕ ನಿಫಾ ವೈರಸ್ ತಗುಲಿದ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಹೀಗಾಗಿ ವೈರಸ್ ಹರಡುವಿಕೆ ನಿಯಂತ್ರಣದಲ್ಲಿದೆ ಎಂಬುದಾಗಿ ಹೇಳಬಹುದು. ಆದರೆ, ಜು.30ರವರೆಗೆ ಕಾದು ನೋಡಬೇಕಿದೆ ಎಂದು ಹೇಳಿದ್ದಾರೆ. 
45 ದಿನಗಳ ಕಾಲಾವಧಿ ಅಗತ್ಯವಾಗಿದ್ದು, ಇದು ಕೇವಲ ಸುರಕ್ಷತೆ ವಿಧಾನವಷ್ಟೇ. ಯಾವುದೇ ಹೊಸ ಪ್ರಕರಣಗಳು ಇನ್ನು ಮುಂದೆ ದಾಖಲಾಗದು ಎಂಬ ದೃಢ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. 
ನಿಫಾ ವೈರಸ್ ಬಗೆಗಿನ ಆತಂಕ ಹೋಗಲಾಡಿಸಲು ಶ್ರಮಿಸಿದ ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಸಹಕಾರ ನೀಡಿದ ವಿರೋಧ ಪಕ್ಷಗಳನ್ನು ಇದೇ ವೇಳೆ ಸಚಿವೆ ಶೈಲಜಾ ಅವರು ಅಭಿನಂದಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ

ರೋಚಕ ಎನಿಸುವ ಇರಾನ್ ಸಮರಾಂಗಣದ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT