ಇಫ್ತಾರ್ ಕೂಟದಲ್ಲಿ ಪ್ರಧಾನಿ ಮೋದಿ ಪತ್ನಿ ಜಶೋದಾಬೆನ್ ಭಾಗಿ; 'ಹೌ ಸ್ವೀಟ್' ಎಂದ ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಪತ್ನಿ ಜಶೋದಾಬೆನ್ ಅಹಮದಾಬಾದ್ ನಲ್ಲಿ ಜೂ. 14 ರಂದು ನಡೆದ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರು.
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಪತ್ನಿ ಜಶೋದಾಬೆನ್ ಅಹಮದಾಬಾದ್ ನಲ್ಲಿ ಜೂ. 14 ರಂದು ನಡೆದ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರು.
ನಗರದ ರಿಲೀಫ್ ರೋಡ್ ಪ್ರದೇಶದಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದ ಜಶೋದಾಬೆನ್, ರಂಜಾನ್ ಉಪವಾಸ ಮಾಡುತ್ತಿರುವವರೊಂದಿಗೆ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತವರೂರಾದ ವಡ್ ನಗರದಿಂದ 35 ಕಿಮೀ ದೂರದಲ್ಲಿರುವ ಬ್ರಹ್ಮನ್ವಾಡ ಎಂಬಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಶೋದಾಬೆನ್ ಈಗ ನಿವೃತ್ತರಾಗಿದ್ದಾರೆ.
ಜಶೋದಾ ಬೆನ್ ಇಫ್ತಾರ್ ನಲ್ಲಿ ಭಾಗಿಯಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ದಿವ್ಯ ಸ್ಪಂದನ (ರಮ್ಯಾ) ಜಶೋದಾಬೆನ್ ಇಫ್ತಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಚಿತ್ರವನ್ನು ರಿಟ್ವೀಟ್ ಮಾಡಿದ್ದು ಹೌ ಸೀಟ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.