ದೇಶ

ಸರ್ಕಾರಗಳಲ್ಲಿ ದೆಹಲಿ, ಪುದುಚೇರಿ ಲೆ.ಗವರ್ನರ್ ಹಸ್ತಕ್ಷೇಪ: ನಾರಾಯಣಸ್ವಾಮಿ

Lingaraj Badiger
ಪುದುಚೇರಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ವಿರುದ್ಧ ಆಪ್ ಸರ್ಕಾರ ಆಹೋ ರಾತ್ರಿ ಧರಣಿ ನಡೆಸಿದ ಬೆನ್ನಲ್ಲೇ ಪದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ, ದೆಹಲಿ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಗಳು ಚುನಾಯಿತ ಸರ್ಕಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಚಿವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಧರಣಿ ನಡೆಸಿದ್ದನ್ನು ಪ್ರಸ್ತಾಪಿಸಿದ ನಾರಾಯಣಸ್ವಾಮಿ, ಅನಿಲ್ ಬೈಜಾಲ್ ಅವರ ಹಸ್ತಕ್ಷೇಪ ಪ್ರಶ್ನಿಸಿ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.
ಪುದುಚೇರಿಯಲ್ಲೂ ಅದೇ ಪರಿಸ್ಥಿತಿ ಇದ್ದು, ಕೇಂದ್ರ ಆಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಚುನಾಯಿತ ಸರ್ಕಾರವನ್ನು ಕಡೆಗಣಿಸಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.
ಈಗ ಕೇಂದ್ರ ಆಡಳಿತ ಪ್ರದೇಶಗಳಿಗೆ ರಾಜ್ಯದ ಸ್ಥಾನಮಾನ ಹಾಗೂ ವಿಶೇಷ ಅಧಿಕಾರಿ ನೀಡುವ ಸಮಯ ಬಂದಿದೆ ಎಂದು ನಾರಾಯಣಸ್ವಾಮಿ ಅವರು ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಪುದುಚೇರಿಗೆ ಪೂರ್ಣ ರಾಜ್ಯದ ಸ್ಥಾನಮಾನಕ್ಕಾಗಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವುದಾಗಿ ತಿಳಿಸಿದ್ದಾರೆ.
SCROLL FOR NEXT