ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಬುಖಾರಿ ಹತ್ಯೆ ಪ್ರಕರಣ: ಕಾಶ್ಮೀರ ಪರಿಸ್ಥಿತಿ ಕುರಿತು ಗೃಹ ಸಚಿವರನ್ನು ಭೇಟಿಯಾದ ಪ್ರಧಾನಿ ಮೋದಿ

ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹಾಗೂ ಅವರ ಇಬ್ಬರು ಅಂಗರಕ್ಷಕರ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡತಂದಿದ್ದು, ಈ ನಡುವಲ್ಲೇ ಕಾಶ್ಮೀರ ಪರಿಸ್ಥಿತಿ ಕುರಿತಂತೆ ಚರ್ಚೆ...

ನವದೆಹಲಿ; ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹಾಗೂ ಅವರ ಇಬ್ಬರು ಅಂಗರಕ್ಷಕರ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡತಂದಿದ್ದು, ಈ ನಡುವಲ್ಲೇ ಕಾಶ್ಮೀರ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲು ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಕಾಶ್ಮೀರ ಪರಿಸ್ಥಿತಿ ಕುರಿತಂತೆ ನಿನ್ನೆಯಷ್ಟೇ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿಯವರು 1 ಗಂಟೆಗಳ ಕಾಲ ಸಭೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 
ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದ್ದರು ಎಂದು ಮೂಲಗಳು ತಿಳಿಸಿವೆ. 
ಸಭೆಯಲ್ಲಿ ಅಮಿತ್ ಶಾ ಮತ್ತು ಮಾಧವ್ ಅವರು ಭಯೋತ್ಪಾದನೆ ವಿರುದ್ಧ ಕಠಿಣ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ. 
ಇಲ್ಲದೆ, ರಂಜಾನ್ ತಿಂಗಳಿನಲ್ಲಿ ಕದನ ವಿರಾಮ ಕುರಿತಂತೆ ತೆಗೆದುಕೊಂಡ ನಿರ್ಧಾರವನ್ನು ಮತ್ತೆ ಮುಂದುವರೆಸಲು ಸಭೆಯಲ್ಲಿ ಚಿಂತನೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!