ದೇಶ

ಆರ್ ಟಿಐ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರದ ಚಿಂತನೆ!

Srinivas Rao BV
ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದರೂ ಸಹ ತಿದ್ದುಪಡಿ ಸ್ವರೂಪದ ಬಗ್ಗೆ ಮಾಹಿತಿ ನೀಡಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರಾಕರಿಸಿದೆ. 
ಅಂಜಲಿ ಭಾರದ್ವಾಜ್ ಎಂಬುವವರು ಸಲ್ಲಿಸಿದ್ದ ಆರ್ ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಆರ್ ಟಿಐ ಕಾಯ್ದೆ ತಿದ್ದುಪಡಿಯ ವಿಷಯ ಇನ್ನೂ ಪರಿಗಣನೆ ಹಂತದಲ್ಲಿದ್ದು ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆರ್ ಟಿಐ ಕಾಯ್ದೆ 2005 ರ ಸೆಕ್ಷನ್ 8(1) (i) ಪ್ರಕಾರ ನೀವು ಕೇಳಿರುವ ಮಾಹಿತಿಯನ್ನು ಈ ಹಂತದಲ್ಲಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. 
ಸರ್ಕಾರ ತಿದ್ದುಪಡಿ ಅಂಶಗಳನ್ನು ಬಹಿರಂಗಪಡಿಸುವುದಕ್ಕೆ ಸಿದ್ಧವಿಲ್ಲ, ತಿದ್ದುಪಡಿ ಅಂಶಗಳ ಕುರಿತು ಸಮಾಲೋಚನೆ ನಡೆಸಲು ಸಹಕಾರಿಯಾಗುವ ಅಂಶಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ ಎಂದು ಅಂಜಲಿ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 
ಆರ್ ಟಿಐ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಮಾಧ್ಯಮ ವರದಿಗಳಿಂದ ತಿಳಿಯಿತು, ಈ ಕುರಿತು ಕೇಳಿದ್ದ ಮಾಹಿತಿಯನ್ನು ನಿರಾಕರಿಸಲಾಗಿದೆ ಎಂದು ಅಂಜಲಿ ಭಾರದ್ವಾಜ್ ಹೇಳಿದ್ದಾರೆ. 
SCROLL FOR NEXT