ಸಂಗ್ರಹ ಚಿತ್ರ 
ದೇಶ

ಗಯಾ ಗ್ಯಾಂಗ್ ರೇಪ್: ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಕಿರುಕುಳ ಶಾಸಕ ಸೇರಿ ಕೆಲ ಆರ್ಜೆಡಿ ನಾಯಕರ ವಿರುದ್ಧ ಪ್ರಕರಣ

ಗಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲ್ ಆರ್ಜೆಡಿ ರಾಷ್ಟ್ರೀಯ ಕಾರ್ಯದರ್ಶಿ...

ಗಯಾ: ಗಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲ್ ಆರ್ಜೆಡಿ ರಾಷ್ಟ್ರೀಯ ಕಾರ್ಯದರ್ಶಿ ಅಲೋಕ್ ಕುಮಾರ್ ಮೆಹ್ತಾ ಮತ್ತು ಶಾಸಕ ಸುರೇಂದ್ರ ಯಾದವ್ ಸೇರಿದಂತೆ ಹಲವು ಆರ್ಜೆಡಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 
ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಎದುರಾದ ಆರ್ಜೆಡಿ ನಾಯಕರು ಆಕೆಯನ್ನು ಪೊಲೀಸ್ ವಾಹನದಿಂದ ಕೆಳಗೆ ಇಳಿಯುವಂತೆ ಜತೆಗೆ ಆಕೆಗೆ ಹೇಗೆ ರೇಪ್ ಮಾಡಲಾಯಿತು. ನಿನ್ನನ್ನು ಎಲ್ಲೆಲ್ಲಿ ಮುಟ್ಟಿದರು ಎಂದು ವಿವರಿಸುವಂತೆ ಕೇಳಿದ್ದಾರೆ. ಅಲ್ಲದೆ ಆಕೆ ಜತೆಗೆ ತಮ್ಮ ಮೊಬೈಲ್ ಗಳಲ್ಲಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಕೆಲವರು ವಿಡಿಯೋವನ್ನು ಮಾಡಿದ್ದಾರೆ. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡಿಐಜಿ ವಿನಯ್ ಕುಮಾರ್ ತಿಳಿಸಿದ್ದಾರೆ. 
ಶಸ್ತ್ರ ಸಜ್ಜಿತ ದುಷ್ಕರ್ಮಿಗಳ ತಂಡವೊಂದು ಮನೆಗೆ ತೆರಳುತ್ತಿದ್ದ ವೈದ್ಯನನ್ನು ಮರಕ್ಕೆ ಕಟ್ಟಿಹಾಕಿ, ಆತನ ಕಣ್ಣೇದುರಿಗೆ ಪತ್ನಿ ಹಾಗೂ 15 ವರ್ಷದ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿತ್ತು.
ಗುರುವಾರ ಸಂಜೆ ತನ್ನ ಖಾಸಗಿ ಕ್ಲಿನಿಕ್ ನಿಂದ ದ್ವಿಚಕ್ರ ವಾಹನದಲ್ಲಿ ಪತ್ನಿ ಮತ್ತು ಮಗಳೊಂದಿಗೆ ಮನಗೆ ಬರುತ್ತಿದ್ದಾಗ ಕೊಂಚ್ ಪೊಲೀಸ್ ಠಾಣಾ ವ್ಯಾಪ್ತಿಯ ಸೊಂದಿಹಾ ಗ್ರಾಮದಲ್ಲಿ ಗೂಂಡಾಗಳು ಅವರನ್ನು ತಡೆದು, ಚಿನ್ನಾಭರಣ, ನಗದು ದೋಚಿದ್ದಾರೆ. ಬಳಿಕ ಪತ್ನಿ ಮಗಳ ಮೇಲೆ ಅತ್ಯಾಚಾರ ಎಸಗಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT