ಮೋದಿ-ಉದ್ಧವ್ ಠಾಕ್ರೆ 
ದೇಶ

ಕಾಶ್ಮೀರದಲ್ಲಿ ರಕ್ತಪಾತಕ್ಕೆ ಮೋದಿ ಸರ್ಕಾರವೇ ಹೊಣೆ: ಶಿವಸೇನೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ, ರಕ್ತಪಾತಗಳ ಬಗ್ಗೆ ಎನ್ ಡಿಎ ಮಿತ್ರಪಕ್ಷ ಶಿವಸೇನೆ ಮಾತನಾಡಿದ್ದು, ರಕ್ತಪಾತಕ್ಕೆ ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರವೇ ಹೊಣೆ ಎಂದು ಆರೋಪಿಸಿದೆ.

ಮುಂಬೈ: ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ, ರಕ್ತಪಾತಗಳ ಬಗ್ಗೆ ಎನ್ ಡಿಎ ಮಿತ್ರಪಕ್ಷ ಶಿವಸೇನೆ ಮಾತನಾಡಿದ್ದು, ರಕ್ತಪಾತಕ್ಕೆ ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರವೇ ಹೊಣೆ ಎಂದು ಆರೋಪಿಸಿದೆ. 
ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ, ರಂಜಾನ್ ತಿಂಗಳಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನಡೆಸದಿರಲು ನಿರ್ಧರಿಸಿದ್ದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ಈ ನಿರ್ಧಾರದಿಂದ ಪಾಕಿಸ್ತಾನ ಅನುಚಿತ ಲಾಭ ಪಡೆಯಲು ಯತ್ನಿಸಿದೆ ಎಂದು ಶಿವಸೇನೆ ಆರೋಪಿಸಿದೆ. 
ಭಯೋತ್ಪಾದಕರು ನಡೆಸಿರುವ ರಕ್ತಪಾತಕ್ಕೆ ಕೇಂದ್ರ ಸರ್ಕಾರದ ನಿರ್ಧಾರವೇ ಕಾರಣವಾಗಿದೆ. ನಮ್ಮ ಸರ್ಕಾರ ರಂಜಾನ್ ತಿಂಗಳಲ್ಲಿ ಸೇನಾ ದಾಳಿ ನಡೆಸದಿರಲು ತೀರ್ಮಾನಿಸಿತ್ತು. ಆದರೆ ಪಾಕಿಸ್ತಾನ ಅದಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ ಎಂದು ಸಂಪಾದಕೀಯ ಹೇಳಿದ್ದು, ಕಾಶ್ಮೀರದಲ್ಲಿ ರಕ್ತಪಾತ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!