ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ದೇಶದಾದ್ಯಂತ ರಂಜಾನ್ ಹಬ್ಬದ ಸಂಭ್ರಮ: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ ಮೋದಿ

ದೇಶದಾದ್ಯಂತ ಈದ್-ಉಲ್-ಫಿತರ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ...

ನವದೆಹಲಿ: ದೇಶದಾದ್ಯಂತ ಈದ್-ಉಲ್-ಫಿತರ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಶುಭಾಶಯಗಳನ್ನು ಕೋರಿರುವ ರಾಷ್ಟ್ರಪತಿ ಕೋವಿಂದ್ ಅವರು, ಈದ್ ಮುಭಾರಕ್. ದೇಶದ ಪ್ರಜೆಗಳಿಗೆ ರಂಜಾನ್ ಹಬ್ಬದ ಶುಭಾಶಯಗಳು. ಪ್ರಮುಖವಾಗಿ ಭಾರತದಲ್ಲಿರುವ ಹಾಗೂ ವಿದೇಶದಲ್ಲಿರುವ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಶುಭಾಶಯಗಳು. ಈ ಸಂತಸದ ಹಬ್ಬ ನಿಮಗೆ ಹಾಗೂ ನಿಮ್ಮ ಕುಟುಂಬದಲ್ಲಿ ಸಂತೋಷವನ್ನು ತರಲಿ. ಹಂಚಿಕೊಂಡು ಬದುಕುತ್ತಿರುವ ಈ ಸಮಾಜದಲ್ಲಿ ಸಹೋದರತ್ವ, ಪರಸ್ಪರ ಸೌಹಾರ್ದತೆ ಹೆಚ್ಚಾಗಲಿ ಎಂದು ಹೇಳಿದ್ದಾರೆ.
ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಶುಭಾಶಯಗಳನ್ನು ಕೋರಿದ್ದು, ಈದ್ ಮುಬುರಾಕ್. ಈ ಸಂತಸದ ದಿನ ನಮ್ಮ ಸಮಾಜದಲ್ಲಿ ಏಕತೆ ಮತ್ತು ಸಾಮರಸ್ಯಗಳ ಬಂಧಗಳು ಗಟ್ಟಿಯಾಗಲಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್