ದೇಶ

ಏಕಕಾಲಕ್ಕೆ ಚುನಾವಣೆ ಕುರಿತು ವಿಸ್ತೃತ ಚರ್ಚೆಗೆ ಪ್ರಧಾನಿ ಮೋದಿ ಕರೆ

Lingaraj Badiger
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕ ಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ವಿಸ್ತೃತ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರೆ ನೀಡಿದ್ದಾರೆ.
ಇಂದು ಬಹುತೇಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ನೀತಿ ಆಯೋಗ ಮಂಡಳಿಯ ನಾಲ್ಕನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಾರ್ಜನಿಕರ ಹಣ ಉಳಿತಾಯ ಮಾಡಲು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ನಡೆಸುವ ಬಗ್ಗೆ ವ್ಯಾಪಕ ಚರ್ಚೆ ಮತ್ತು ಸಮಾಲೋಚನೆ ನಡೆಸುವಂತೆ ಕರೆ ನೀಡಿದರು.
ಏಕ ಕಾಲಕ್ಕೆ ಚುನಾವಣೆ ನಡೆಸುವ ಯೋಚನೆಯೊಂದಿಗೆ ಕೇಂದ್ರ ಸರ್ಕಾರ ಕೆಲ ಕಾಲ ಕೆಲಸ ಮಾಡಲು ಯತ್ನಿಸುತ್ತಿದೆ ಎಂದು ಪ್ರಧಾನಿ ಹೇಳಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೀತಿ ಆಯೋಗ ಕಳೆದ ವರ್ಷ, 2024ರಿಂದ ಎರಡು ಹಂತಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಏಕ ಕಾಲಕ್ಕೆ ಚುನಾವಣೆ ನಡೆಸಬಹುದು ಎಂದು ಹೇಳಿತ್ತು.
ಇದೇ ವೇಳೆ, ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿನ ಕಾರ್ಪೋರೇಟ್ ಹೂಡಿಕೆ ಅತ್ಯಂತ ಕಡಿಮೆ ಇದೆ. ಕೃಷಿ ಕ್ಷೇತ್ರದಲ್ಲಿನ ಕಾರ್ಪೋರೇಟ್ ಹೂಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿಯಮಗಳನ್ನು ಬದಲಿಸಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ.
SCROLL FOR NEXT