ಎಲ್-ಜೆ v/s ಕೇಜ್ರಿವಾಲ್: ಉಪವಾಸ ನಿರತ ಮನೀಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲು 
ದೇಶ

ಎಲ್-ಜೆ v/s ಕೇಜ್ರಿವಾಲ್: ಉಪವಾಸ ನಿರತ ಮನೀಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲು

ಜೂನ್ 13 ರಿಂದ ಉಪವಾಸ ನಿರತರಾಗಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ದೆಹಲಿಯ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವದೆಹಲಿ: ಜೂನ್  13 ರಿಂದ ಉಪವಾಸ ನಿರತರಾಗಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ದೆಹಲಿಯ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೆ. ಗವರ್ನರ್ ಕಛೇರಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜತೆ ಧರಣಿ ನಡೆಸಿದ್ದ ಸಿಸೋಡಿಯಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಕಲಾದ್ದಾರೆಂದು ಕೇಜ್ರಿವಾಲ್ ಹೇಳಿದರು.
"ಸಿಸೋಡಿಯಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಸಿಸೋಡಿಯಾ ಅವರ ಕೀಟೋನ್ ಮಟ್ಟವು 7.4 ಕ್ಕೆ ತಲುಪಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿದೆ. ಇದೇ ವೇಳೆ ದೆಹಲಿ ಆರೋಗ್ಯ ಸಚಿವರಾದ ಸತ್ಯೇಂದರ್ ಜೈನ್ ಸಹ ಉಪಾವಾಸ ಸತ್ಯಾಗ್ರಹದಿಂದ ನಿಶ್ಯಕ್ತಿ, ಅನಾರೋಗ್ಯ ಸಮಸ್ಯೆಗಳುಂಟಾಗಿ ಭಾನುವಾರ ರಾತ್ರಿ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಜೂನ್ 12ರಿಂದ ಉಪವಾಸ ನಿರತರಾಗಿದ್ದರು.
ಜೈನ್ ಆರೋಗ್ಯ ಸುಧಾರಿಸಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಜೈನ್ ಮತ್ತು ಸಿಸೋಡಿಯಾ  ಜೂನ್ 11 ರಿಂದ ಕೇಜ್ರಿವಾಲ್ ಮತ್ತು ಗೋಪಾಲ್ ರೈ ಜತೆಗುಡಿ ರಾಜ ಭವನದಲ್ಲಿ ಐಎಎಸ್ ಅಧಿಕಾರಿಗಳ ಮುಷ್ಕರ ಹಿಂದೆಗೆದುಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್