ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯ ಬುರಾರಿಯಲ್ಲಿ ಗ್ಯಾಂಗ್ ವಾರ್ : ಮೂವರು ಸಾವು, ಐವರಿಗೆ ಗಾಯ

ಉತ್ತರ ದೆಹಲಿಯ ಬುರಾರಿಯಲ್ಲಿ ಎರಡು ರೌಡಿ ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಉತ್ತರ ದೆಹಲಿಯ ಬುರಾರಿಯಲ್ಲಿ ಎರಡು ರೌಡಿ ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆ.  ಇದರಿಂದಾಗಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಲ್ಲಿ ಹತ್ಯೆ ಹಾಗೂ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಟಿಲ್ಲು ಮತ್ತು ಗೊಗಿ ರೌಡಿ ಗುಂಪುಗಳ ನಡುವೆ  ಗುಂಡಿನ ದಾಳಿ ನಡೆದಿದೆ. ಘಟನೆ ನಂತರ ಗಾಯಗೊಂಡಿದ್ದ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ.

ಗೊಗಿ ತಂಡದ ಸದಸ್ಯರು ಚಲಾಯಿಸುತ್ತಿದ್ದ ಪಾರ್ಚೂನರ್ ಕಾರು ಟಿಲ್ಲು ಕಡೆಯವರಿದ್ದ ಸ್ಕಾರ್ಪಿಯೋ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ಉಭಯ ತಂಡಗಳ ನಡುವೆ ಮಾರಾಮಾರಿ ನಡೆದಿದ್ದು, ಪರಸ್ಪರ ಗುಂಡಿನಿಂದ ಹೊಡೆದುಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಟಿಲು ತಂಡದ ಇಬ್ಬರು ಸದಸ್ಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ.ಶಂಕಿತ
 ಗೊಗಿ ತಂಡದ ಸದಸ್ಯರನ್ನು ಇನ್ನೂ ಬಂಧಿಸಿಲ್ಲ. ಪ್ರತಿಷ್ಠೆಗಾಗಿ ಈ ಹಿಂದೆಯೂ  ಎರಡು ಗುಂಪಿನ ಸದಸ್ಯರ ಹತ್ಯೆಯಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.






Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?